Advertisement

ಕ್ಷಯ ಮುಕ್ತ ಭಾರತ ನಿರ್ಮಾಣಕ್ಕೆ ಕೈ ಜೋಡಿಸಿ

03:16 PM Nov 26, 2019 | Team Udayavani |

ರಾಣಿಬೆನ್ನೂರ: ಭಾರತ ಸರ್ಕಾರದ ಆಶಯದಂತೆ 2025ರ ಹೊತ್ತಿಗೆ ಕ್ಷಯ ಮುಕ್ತ ಭಾರತ ನಿರ್ಮಾಣ ಮಾಡುವಲ್ಲಿ ಆರೋಗ್ಯ ಇಲಾಖೆ ಜತೆಗೆ ಸಾರ್ವಜನಿಕರು ಕೈಜೋಡಿಸಬೇಕು ಎಂದು ತಾಲೂಕು ಪಂಚಾಯತ್‌ ಕಾರ್ಯನಿರ್ವಾಹಕ ಅಧಿಕಾರಿ ಎಸ್‌.ಆರ್‌. ಕಾಂಬಳೆ ಹೇಳಿದರು.

Advertisement

ಸೋಮವಾರ ಇಲ್ಲಿನ ಹಲಗೇರಿ ರಸ್ತೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ತಾಲೂಕು ಆರೋಗ್ಯಾಧಿಕಾರಿಗಳ ಕಾರ್ಯಾಲಯ ಹಾಗೂ ಸಾರ್ವಜನಿಕ ಆಸ್ಪತ್ರೆಯ ಆಶ್ರಯದಲ್ಲಿ ಸಕ್ರೀಯ ಕ್ಷಯರೋಗ ಪತ್ತೆ ಹಾಗೂ ಚಿಕಿತ್ಸಾ ಆಂದೋಲನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮಾಂತರ ಪ್ರದೇಶದಲ್ಲಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ನಮ್ಮ ಇಲಾಖೆ ಸಂಪೂರ್ಣ ಸಹಕಾರ ನೀಡುತ್ತದೆ ಎಂದರು.

ತಾಲೂಕು ಆರೋಗ್ಯಾಧಿಕಾರಿ ಡಾ| ಸಂತೋಷಕುಮಾರ ಮಾತನಾಡಿ, ತಾಲೂಕಿನಲ್ಲಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪೂರ್ವ ಸಿದ್ಧತೆಯನ್ನು ಮಾಡಿಕೊಂಡಿದ್ದು, ಎಲ್ಲ ಆರೋಗ್ಯ ಸಿಬ್ಬಂದಿಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಮುಂದಾಗಬೇಕು ಎಂದರು.

ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿ ಕಾರಿ ಡಾ| ಗೋವಿಂದ ಮಾತನಾಡಿ, ಸಾರ್ವಜನಿಕ ಆಸ್ಪತ್ರೆಯಲ್ಲಿ ಪತ್ತೆಯಾದ ಸಂಭಾವ್ಯ ಕ್ಷಯ ರೋಗಿಗಳಿಗೆ ವೈದ್ಯಾಧಿ ಕಾರಿಗಳ ಸಲಹೆ ಮತ್ತು ಸೂಚನೆ ಮೇರೆಗೆ ಉಚಿತವಾಗಿ ಎಕ್ಸರೇ ಸೌಲಭ್ಯ ಒದಗಿಸಲಾಗುವುದು ಎಂದರು.

ಹಿರಿಯ ಮೇಲ್ವಿಚಾರಕ ಜಗದೀಶ ಪಾಟೀಲ ಮಾತನಾಡಿ, ತಾಲೂಕಿನಲ್ಲಿ ಸಮೀಕ್ಷೆ ಕಾರ್ಯಕ್ರಮಕ್ಕಾಗಿ ಅಪಾಯದ ಹಂಚಿನಲ್ಲಿರುವ 8 ದುರ್ಬಲ ಗುಂಪುಗಳನ್ನು ಗುರುತಿಸಿ ಅದರಲ್ಲಿರುವ 41861 ಮನೆಗಳಲ್ಲಿರುವ 1,83,067 ಜನರಿಗೆ ಸಮೀಕ್ಷೆ ಮಾಡುವ ಉದ್ದೇಶವನ್ನು ಹೊಂದಿದ್ದು, ಅದಕ್ಕಾಗಿ ಕ್ರಿಯಾ ಯೋಜನೆಯನ್ನು ತಯಾರಿಸಲಾಗಿದೆ ಎಂದರು.

Advertisement

ಒಟ್ಟು 114 ತಂಡ ರಚನೆ ಮಾಡಿದ್ದು, ಅದರಲ್ಲಿ 84 ಆರೋಗ್ಯ ಸಿಬ್ಬಂದಿ ಮತ್ತು 128 ಆಶಾ ಕಾರ್ಯಕರ್ತೆಯರಿಗೆ ತರಬೇತಿ ನೀಡಿ ಸಮೀಕ್ಷೆ ಕಾರ್ಯಕ್ರಮಕ್ಕೆ ನಿಯೋಜಿಸಲಾಗಿದೆ. ನ. 25 ರಿಂದ ಡಿ. 10ರ ವರೆಗೆ ಈ ತಂಡಗಳು ಮನೆ ಮನೆಗೆ ಭೇಟಿ ನೀಡಿ ಕ್ಷಯ ರೋಗದ ಬಗ್ಗೆ ಮಾಹಿತಿ ನೀಡಿ, ಸಂಭಾವ್ಯ ಕ್ಷಯ ರೋಗಿಗಳನ್ನು ಗುರುತಿಸಿ ವಿವಿಧ ರೀತಿಯಲ್ಲಿ ಪರೀಕ್ಷಿಸಿ ಚಿಕಿತ್ಸೆ ನೀಡಲಾಗುವುದು ಎಂದರು. ಶ್ರೀಧರ ಅಗಸಿಬಾಗಲ, ನಾಗರಾಜ ಕುಡಪಲಿ, ಮಲ್ಲಿಕಾರ್ಜುನ, ಪರಮೇಶ್ವರಪ್ಪ, ಗಿರೀಶ, ಮಾರುತಿ, ಸವಿತಾ, ಶಿಲ್ಪಾ, ಶಿವಪುತ್ರಪ್ಪ ಮುಂತಾದವರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next