Advertisement

ರಾಷ್ಟ್ರದ ಆರ್ಥಿಕ ಪ್ರಗತಿಗೆ ಕೈಜೋಡಿಸಿ: ನಾಡಗೌಡ್ರ

03:17 PM Jan 22, 2021 | Team Udayavani |

ಗದಗ: ದೇಶದ ಕಟ್ಟಕಡೆಯ ವ್ಯಕ್ತಿ ಆರ್ಥಿಕವಾಗಿ ಸದೃಢರಾದಾಗ ಮಾತ್ರ ರಾಷ್ಟ್ರ ಪ್ರಗತಿ ಕಾಣಲು ಸಾಧ್ಯವಾಗುತ್ತದೆ. ಸರಕಾರ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಿ, ರಾಷ್ಟ್ರವನ್ನು ಆರ್ಥಿಕವಾಗಿ ಸದೃಢವನ್ನಾಗಿಸಬೇಕು ಎಂದು ಜಿಪಂ ಅಧ್ಯಕ್ಷ ಈರಪ್ಪ ನಾಡಗೌಡ್ರ ಹೇಳಿದರು.

Advertisement

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿ  ಕಾರ, ಜಿಲ್ಲಾಡಳಿತ ಜಿಪಂ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಜಿಪಂ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಬಡತನ ನಿರ್ಮೂಲನಾ ಯೋಜನೆ-2015 ಪರಿಣಾಮಕಾರಿ ಅನುಷ್ಠಾನ ಕುರಿತು ತರಬೇತಿ ಭತ್ಯೆ ಪಡೆಯುತ್ತಿರುವ ಕಾನೂನು ಪದವೀದರರಿಗೆ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ದೇಶದಲ್ಲಿ ಬಡತನ ನಿರ್ಮೂಲನೆಗಾಗಿ ಸರಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಬೇಕಾಗಿದೆ. ತರಬೇತಿ ಭತ್ಯೆ ಪಡೆಯುತ್ತಿರುವ ಕಾನೂನು ಪದವೀದರರು ಪ್ರತಿ ಗ್ರಾಮಗಳಿಗೆ ಭೇಟಿ ನೀಡಿ, ಸರಕಾರದಿಂದ ಜಾರಿಯಾದ ಯೋಜನೆಗಳ ಸದುಪಯೋಗ ಪಡೆಯಬೇಕಾದ ಅರ್ಹ ಫಲಾನುಭವಿಗಳನ್ನು ಗುರುತಿಸಬೇಕು. ಸರಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳ ಬದಲು ಅನರ್ಹ ಫಲಾನುಭವಿ ಪಡಯುತ್ತಿರುವದನ್ನು ಗುರುತಿಸುವುದೂ ತಮ್ಮ ಜವಾಬ್ದಾರಿಯಾಗಿದೆ. ಅನರ್ಹರು ಯೋಜನೆಗಳನ್ನು ಪಡೆದಿರುವದು ಕಂಡುಬಂದಲ್ಲಿ ಸಂಬಂ ಧಿಸಿ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದು ಸೂಚಿಸಿದರು. ದೇಶದಲ್ಲಿ ನೈಸರ್ಗಿಕ ಸಂಪತ್ತು, ಮಾನವ ಸಂಪನ್ಮೂಲ ಯಥೇಚ್ಚವಾಗಿದ್ದು ಗ್ರಾಮೀಣ ಪ್ರದೇಶದ ಯುವಜನತೆ ಸರಕಾರದ ಯೋಜನೆಗಳ ಜೊತೆಗೆ ಸ್ಥಳೀಯವಾಗಿ ದೊರಯುವ ಸಂಪನ್ಮೂಲಗಳಿಂದ ಆರ್ಥಿಕವಾಗಿ ಸದೃಢವಾಗಲು ಮುಂದಾಗುವಂತೆ ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾ  ಧಿಕಾರದ ಸದಸ್ಯ ಕಾರ್ಯದರ್ಶಿ ಎಸ್‌.ಜಿ. ಸಲಗರೆ ಮಾತನಾಡಿ, ದೇಶದ ಬಡತನ ನಿರ್ಮೂಲನೆಗಾಗಿ ಸರಕಾರ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಸರಕಾರದ ಯೋಜನೆ ಪಡೆದುಕೊಳ್ಳಲು ಬೇಕಾದ ಅರ್ಹತೆ ಹಾಗೂ ಅರ್ಹ ಫಲಾನುಭವಿಗಳನ್ನು ಗುರುತಿಸಲು ಈ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ. ತರಬೇತಿ ಭತ್ಯೆ ಪಡೆಯುತ್ತಿರುವ ಕಾನೂನು ಪದವೀದರರು ಪ್ರತಿ 15 ದಿನಗಳಿಗೊಮ್ಮೆ ಗ್ರಾಮಗಳಿಗೆ ಭೇಟಿ ನೀಡಿ ಸರಕಾರದ ಸೌಲಭ್ಯ ಪಡೆಯಲು ಅರ್ಹರಾಗಿದ್ದಾರಾ ಅಥವಾ ಸೌಲಭ್ಯ ಪಡೆದಿರುವುದಿಲ್ಲ ಎಂಬುದರ ಕುರಿತು ವರದಿ ನೀಡಬೇಕಾಗುವದು ಎಂದು ತಿಳಿಸಿದರು.

ಇದನ್ನೂ ಓದಿ:‘ಇನ್ಸ್‌ಪೆಕ್ಟರ್‌ ವಿಕ್ರಂ’ ರೆಡಿ ಟು ರಿಪೋರ್ಟಿಂಗ್‌ …

Advertisement

ಗದಗ ತಹಶೀಲ್ದಾರ ಶ್ರೀನಿವಾಸಮೂರ್ತಿ ಕುಲಕರ್ಣಿ ಮಾತನಾಡಿ, ಕಂದಾಯ ಇಲಾಖೆಯಿಂದ ಹಿರಿಯ ನಾಗರಿಕರಿಗೆ, ಅಂಗವಿಕಲರಿಗೆ, ನಿರ್ಗತಿಕ ಮಹಿಳೆಯರಿಗೆ ಮತ್ತು ತೃತಿಯ ಲಿಂಗಿಗಳಿಗಾಗಿ ಹಲವು ಯೋಜನೆಗಳಿದ್ದು ಇವಗಳ ಬಗ್ಗೆ ಅರಿವು ಮೂಡಿಸಿ ಜಾಗೃತಗೊಳಿಸಬೇಕಾಗಿದೆ ಎಂದರು.

ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರಶಾಂತ ವರಗಪ್ಪನ್ನವರ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿದ್ಯಾರ್ಥಿಗಳಿಂದ ಹಿರಿಯ ನಾಗರಿಕರವರೆಗೂ ಹಲವು ಸೌಲಭ್ಯಗಳು ಲಭ್ಯವಿವೆ. ಹಲವು ಸೌಲಭ್ಯಗಳ ಬಗ್ಗೆ ವಂಚಿತರಿಗೆ ಮಾಹಿತಿ ನೀಡಿ ಯೋಜನೆಗಳ ಬಗ್ಗೆ ಮನವರಿಕೆ ಮಾಡಿಕೊಡಬೇಕಾಗಿದೆ ಎಂದರು. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ಸಿ.ಎ.ವಿಠuಲರಾವ್‌, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ

ಜಿಲ್ಲಾ ಅಧಿಕಾರಿ ರವಿ ಗುಂಜಿಕರ ಹಾಗೂ ಮತ್ತಿತರೆ ಅ ಕಾರಿಗಳು ತಮ್ಮ ಇಲಾಖೆಯ ಯೋಜನೆಗಳನ್ನು ವಿವರಿಸಿದರು.ನ್ಯಾಯವಾದಿ ಸಿ.ಬಿ.ಗೂಳರಡ್ಡಿ ಸ್ವಾಗತಿಸಿ ಮಲ್ಲೇಶ ಹೊಸಳ್ಳಿ ನಿರೂಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next