Advertisement

ಸರ್ಕಾರಿ ಶಾಲೆಗಳ ಪುನಶ್ಚೇತನಕ್ಕೆ ಕೈಜೋಡಿಸಿ

05:42 PM Aug 14, 2019 | Suhan S |

ಮಂಡ್ಯ: ಸೌಲಭ್ಯಗಳಿಂದ ವಂಚಿತವಾಗಿರುವ ಸರ್ಕಾರಿ ಶಾಲೆಗಳನ್ನು ಪುನಶ್ಚೇತನ ಗೊಳಿಸುವುದು ಎಲ್ಲರ ಕರ್ತವ್ಯ ಎಂದು ನಗರ ಬಿಜೆಪಿ ಅಧ್ಯಕ್ಷ ಎಚ್.ಅರ್‌. ಅರವಿಂದ್‌ ತಿಳಿಸಿದರು.

Advertisement

ನಗರದ ಗುತ್ತಲು ರಸ್ತೆಯಲ್ಲಿರುವ ಕರ್ನಾಟಕ ಪಬ್ಲಿಕ್‌ ಶಾಲೆ (ಕುವೆಂಪು ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ)ಯಲ್ಲಿ ಎಲ್.ಕೆ.ಜಿ. ಮಕ್ಕಳಿಗೆ ಉಚಿತ ನೋಟ್ ಬುಕ್‌ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್‌ ಮಾಧ್ಯಮ ಆರಂಭಿಸಿ ರುವುದು ಶ್ಲಾಘನೀಯ. ಇದರಿಂದ ಖಾಸಗಿ ಶಾಲೆಗಳಿಗೂ ಪೈಪೋಟಿ ನಡೆಸಲು ಸಾಧ್ಯವಾಗಿದೆ ಎಂದು ಹೇಳಿದರು.

ಇತರೆ ಭಾಷೆ ಕಲಿತರೆ ತಪ್ಪಿಲ್ಲ: ಎಲ್ಲ ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುತ್ತಿದ್ದರು. ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭವಾದ ಬಳಿಕ ಮಕ್ಕಳ ದಾಖಲಾತಿಗೆ ಬೇಡಿಕೆ ಹೆಚ್ಚಾಗಿದೆ. ಸರ್ಕಾರಿ ಶಾಲೆಗಳತ್ತ ಪೋಷಕರು ಮುಖ ಮಾಡಿದ್ದಾರೆ. ಕನ್ನಡ ಸಂಘಟನೆಗಳವರು ಕನ್ನಡವೇ ಮುಖ್ಯ ಎಂದು ಹೇಳುತ್ತಾರೆ. ಆದರೆ, ಬದುಕಿಗಾಗಿ ಎಲ್ಲ ಭಾಷೆಗಳನ್ನು ಕಲಿಯುವುದು ಅಗತ್ಯ. ಕಲಿಯುವುದು ತಪ್ಪಲ್ಲ, ಆದರೆ ಕನ್ನಡವನ್ನು ಮರೆಯದಂತೆ ಕಾಪಾಡುವುದು ಸಹ ಅಷ್ಟೇ ಮುಖ್ಯ. ಆಂಗ್ಲಭಾಷೆ, ಹಿಂದಿ ಭಾಷೆಯನ್ನು ಕಲಿಯುವುದರಿಂದ ಜೀವನದಲ್ಲಿ ಎಲ್ಲಿ ಬೇಕಾದರೂ ಜೀವನ ಕಟ್ಟಿಕೊಳ್ಳಬಹುದು. ಕನ್ನಡದ ಅಭಿಮಾನವಿ ರಬೇಕು ಎಂದು ತಿಳಿಸಿದರು.

ಸರ್ಕಾರಿ ಶಾಲೆ ಉಳಿಸಿ: ಜಿಲ್ಲಾ ಗಾಣಿಗರ ಸಮಾಜ ಸೇವಾ ಸಂಘದ ಜಿಲ್ಲಾಧ್ಯಕ್ಷ ಲೋಕೇಶ್‌ ಮಾತನಾಡಿ, ಸರ್ಕಾರಿ ಶಾಲೆಗಳು ಮುಚ್ಚುವಂತಹ ದಿನಗಳಲ್ಲಿ ಪೋಷಕರು ಮತ್ತು ಸಾರ್ವಜನಿಕರು ಸಹಕಾರ ನೀಡಬೇಕು. ಅದರಿಂದ ಸರ್ಕಾರಿ ಶಾಲೆಗಳ ಉಳಿವು ಸಾಧ್ಯವಾಗುತ್ತದೆ. ಸರ್ಕಾರಿ ಶಾಲೆಗಳನ್ನು ಉಳಿಸಿದಲ್ಲಿ ಮಾತ್ರ ಮುಂದೆ ಮಕ್ಕಳ ಭವಿಷ್ಯ ಉತ್ತಮವಾಗಿರುತ್ತದೆ ಎಂಬುದನ್ನು ಅರಿತು ಸರ್ಕಾರಿ ಶಾಲೆಗಳ ಉಳಿವಿಗೆ ಸಹಕರಿಸಬೇಕು ಎಂದು ಹೇಳಿದರು.

ಸಮಾರಂಭದಲ್ಲಿ ಚುಟುಕು ಸಾಹಿತ್ಯ ಪರಿಷತ್‌ ಜಿಲ್ಲಾಧ್ಯಕ್ಷ ಜಿ.ವಿ. ನಾಗರಾಜು, ಪತ್ರಕರ್ತ ನಾರಾಯಣಸ್ವಾಮಿ, ಸಮಾಜ ಸೇವಕಿ ನೀನಾ ಪಟೇಲ್, ನಗರಸಭಾ ಸದಸ್ಯೆ ಸೌಭಾಗ್ಯ ಶಿವಲಿಂಗು, ಪ್ರಾಂಶುಪಾಲ ಮಹದೇವು, ಮುಖ್ಯಶಿಕ್ಷಕ ಮೂಡಲಗಿರಿಯಪ್ಪ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಪದ್ಮ, ಅಮರ್‌ನಾಥ್‌, ರಮೇಶ್‌, ಮಧು ಭಾಗವಹಿಸಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next