ರವಿವಾರ ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್‌ನಲ್ಲಿ ಮಾತನಾಡುತ್ತಾ ಅವರು ಈ ವಿಚಾರ ತಿಳಿಸಿದ್ದಾರೆ.
Advertisement
ಜತೆಗೆ, ಹಬ್ಬಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಖಾದಿ ಉತ್ಪನ್ನಗಳನ್ನು ಖರೀದಿಸುವಂತೆ ಹಾಗೂ ಸ್ಥಳೀಯ ಉತ್ಪನ್ನಗಳಿಗೆ ಹೆಚ್ಚು ಆದ್ಯತೆ ನೀಡುವಂತೆಯೂ ಮನವಿ ಮಾಡಿದ್ದಾರೆ. ಇದೇ ವೇಳೆ, ಜಿ20 ಶೃಂಗದ ವೇಳೆ ಘೋಷಿಸಲಾದ ಭಾರತ-ಮಧ್ಯಪ್ರಾಚ್ಯ-ಯುರೋಪ್ ಕಾರಿಡಾರ್ ಮುಂಬರುವ ಸಾವಿರಾರು ವರ್ಷಗಳ ಕಾಲ ಜಾಗತಿಕ ವ್ಯಾಪಾರಕ್ಕೆ ಆಧಾರವಾಗಿ ನಿಲ್ಲಲಿದೆ. ಅಷ್ಟೇ ಅಲ್ಲ, ಈ ಯೋಜನೆಯು ಚಿಗುರೊಡೆದಿದ್ದು ಭಾರತದಲ್ಲಿ ಎಂದು ಇತಿಹಾಸವು ನೆನಪಿಸಿಕೊಳ್ಳಲಿದೆ ಎಂದು ಮೋದಿ ಹೇಳಿದ್ದಾರೆ.