ರಾಮನಗರ: ಚನ್ನಪಟ್ಟಣ ಹಾಗೂ ರಾಮನಗರ ನಗರಸಭೆಗಳಿಗೆ ಏ.27ರಂದು ಚುನಾವಣೆ ನಡೆಯಲಿದ್ದು, ಕೊರೊನಾ ಸೋಂಕು ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗವು ಪ್ರಚಾರದ ವೇಳೆ ಅಭ್ಯರ್ಥಿಗಳು ಪಾಲಿಸಬೇಕಾದ ಕೆಲವು ಸೂಚನೆ ನೀಡಿದೆ.
ಸೂಚನೆಗಳೇನು?: ಪ್ರಚಾರದ ವೇಳೆ ಅಭ್ಯ ರ್ಥಿಯೂ ಸೇರಿ ಗರಿಷ್ಠ 5 ಮಂದಿ ಬೆಂಬಲಿಗರೊಂದಿಗೆ ಫೇಸ್ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಮನೆ, ಮನೆಗೆ ಭೇಟಿ ಕೊಟ್ಟು ಪ್ರಚಾರ ಮಾಡಬಹುದು. ಪ್ರಚಾರಕ್ಕೆ ಯಾವುದೇ ವಾಹನ ಬಳಸುವುದನ್ನು ಹಾಗೂ ಗುಂಪು, ಗುಂಪಾಗಿ ಪ್ರಚಾರ ಮಾಡುವುದನ್ನು ನಿಷೇಧಿಸಿದೆ.
ಅಭ್ಯರ್ಥಿಗಳು ಪ್ರಚಾರದ ಸಂದ ರ್ಭದಲ್ಲಿ ಫೇಸ್ ಮಾಸ್ಕ್ ಕಡ್ಡಾಯವಾಗಿ ಧರಿಸತಕ್ಕದ್ದು, ವಿದ್ಯುನ್ಮಾನ ಮೀಡಿಯಾದಲ್ಲಿ ಪ್ರಚಾರ ಕೈಗೊಳ್ಳಬಹುದು. ಅಭ್ಯರ್ಥಿಗಳು ಪ್ರಚಾರಕ್ಕಾಗಿ ನಿಯಮಾನುಸಾರ ಮುದ್ರಿಸಿದ ಕರಪತ್ರಗಳನ್ನು ಹಂಚಬಹುದು. ಈ ಸಂದರ್ಭದಲ್ಲಿ ಕಡ್ಡಾಯವಾಗಿ ಕೈಗವುಸು, ಫೇಸ್ ಮಾಸ್ಕ್ ಧರಿಸಿರಬೇಕು.
ಈ ಮೇಲ್ಕಂಡ ಸೂಚನೆಗಳನ್ನು ಹೊರತುಪಡಿಸಿ ಇನ್ಯಾವುದೇ ತರಹದ ಪ್ರಚಾರ ಕೈಗೊಳ್ಳುವಂತಿಲ್ಲ ಎಂದು ಆದೇಶ ಸ್ಪಷ್ಟವಾಗಿ ತಿಳಿಸಿದೆ. ರಾಜ್ಯದಲ್ಲಿ ಕೋವಿಡ್ ಸೋಂಕು ಹಿನ್ನೆಲೆ ಯಲ್ಲಿ ಪ್ರಸ್ತುತ ಉಲ್ಲೇಖಗಳನ್ವಯ ಘೋಷಣೆ ಯಾಗಿರುವ ನಗರ ಸ್ಥಳೀಯ ಸಂಸ್ಥೆಗಳ ಸಾರ್ವ ತ್ರಿಕ ಚುನಾವಣೆ ಮತ್ತು ಉಪಚುನಾವಣೆಗೆ ಸಂಬಂಧಿಸಿದಂತೆ ಅಭ್ಯರ್ಥಿಗಳು ಚುನಾವಣಾ ಪ್ರಚಾರ ಕೈಗೊಳ್ಳುವ ಕುರಿತು ಭಾರತ ಸಂವಿಧಾ ನದ ಪರಿಚ್ಚೇದ 243 ಜೆಡ್‌ಎ ಅನ್ವಯ ಪ್ರದತ್ತ ವಾಗಿರುವ ಅಧಿಕಾರವನ್ನು ಚಲಾಯಿಸಿ ಈ ನಿರ್ದೇಶನ ನೀಡಿ ಆದೇಶಿಸಿರುವುದಾಗಿ ರಾಜ್ಯ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
ಸಂಜೆ 6ರ ನಂತರ ಪ್ರಚಾರ ಬೇಡ: ಚುನಾವಣಾ ಪ್ರಚಾರದ ವೇಳೆ ಅಭ್ಯರ್ಥಿಗಳು ಪಾಲಿಸಬೇಕಾದ ಕೋವಿಡ್ ನಿಯಮಗಳ ಬಗ್ಗೆ ಆದೇಶ ಹೊರಡಿಸಿದೆ. ಆದರೆ, ಇದು ಎಷ್ಟರಮಟ್ಟಿಗೆ ಪಾಲನೆಯಾಗುತ್ತದೆ ಎಂಬ ಪ್ರಶ್ನೆ ನಾಗರಿಕರನ್ನು ಕಾಡುತ್ತಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಸಂಜೆಯ ನಂತರ ಗುಂಪು, ಗುಂಪಾಗಿ ಪ್ರಚಾರ ನಡೆಯುತ್ತಿದೆ. ಇದನ್ನು ಕೇಳುವವರೇ ಇಲ್ಲ ಎಂದು ನಾಗರಿಕರು ದೂರಿ ದ್ದಾರೆ. ಸಂಜೆ 6 ಗಂಟೆ ನಂತರ ಚುನಾವಣಾ ಪ್ರಚಾರ ಬಂದ್ ಮಾಡಿ ಎಂಬ ಸಲಹೆಗಳು ನಾಗರಿಕರಿಂದ ವ್ಯಕ್ತವಾಗಿದೆ. ಬೆಳಗ್ಗೆ 7ರಿಂದ ಸಂಜೆ 6 ಗಂಟೆಯವರೆಗೆ ಮಾತ್ರ ಸೀಮಿತ ಮಂದಿಯೊಂದಿಗೆ ಅಭ್ಯರ್ಥಿಗಳು ಪ್ರಚಾರ ಮಾಡಲಿ ಎಂದು ಒತ್ತಾಯಿಸಿದ್ದಾರೆ.