ತೀರ್ಮಾನಿಸಿದ್ದಾರೆ.
Advertisement
ಈ ಕುರಿತು ಎರಡೂ ಪಕ್ಷಗಳ ನಾಯಕರು ಕಾರ್ಯಕ್ರಮದ ಪೂರ್ವ ಸಿದ್ಧತೆ ಕುರಿತು ಪ್ರತ್ಯೇಕ ಸಭೆ ನಡೆಸಿದ್ದು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಸೇರಿದಂತೆ ಕಾಂಗ್ರೆಸ್ ಹಾಗೂ ಜೆಡಿಎಸ್‌ನ ಎಲ್ಲ ರಾಜ್ಯ ನಾಯಕರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.
ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ಹೊಂದಾಣಿಕೆ ಕೊರತೆ ಉಂಟಾಗಿರುವುದರಿಂದ ಜಿಲ್ಲಾ ಮಟ್ಟದಲ್ಲಿಯೂ ಸಮನ್ವಯ ಸಮಿತಿ ರಚನೆ ಮಾಡಲು ಎರಡೂ ಪಕ್ಷಗಳ ನಾಯಕರು ಸಹಮತ ವ್ಯಕ್ತಪಡಿಸಿದ್ದಾರೆ. ಕೆಲವು ಕ್ಷೇತ್ರಗಳಲ್ಲಿ ಕಾರ್ಯಕರ್ತರು ಜಂಟಿಯಾಗಿ ಪ್ರಚಾರ ಮಾಡದಿದ್ದರೂ, ಮೈತ್ರಿ ಪಕ್ಷದ ಅಭ್ಯರ್ಥಿ ಪರ ಪ್ರತ್ಯೇಕವಾಗಿ ಪ್ರಚಾರ ಮಾಡುವಂತೆ ಸೂಚಿಸಲು
ಸಭೆಯಲ್ಲಿ ನಿರ್ಣಯಿಸಲಾಗಿದೆ ಎಂದು ತಿಳಿದು ಬಂದಿದೆ. ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಕೆ.ಪಾಟಿಲ್, ಉಪಾಧ್ಯಕ್ಷರಾದ ಬಿ.ಎಲ್. ಶಂಕರ್ ಇತರರು ಪಾಲ್ಗೊಂಡಿದ್ದರು.
Related Articles
ಬೆಂಗಳೂರು: ರಾಜ್ಯದಲ್ಲಿ ಚುನಾವಣಾ ಪ್ರಚಾರಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಅವರನ್ನು ಕರೆಸಲು ಪ್ರಯತ್ನ ನಡೆಸಲಾಗುತ್ತಿದೆ. ಆದರೆ, ಅವರು ಬರುವ ಬಗ್ಗೆ ಇನ್ನೂ ಭರವಸೆ ಸಿಕ್ಕಿಲ್ಲ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಕೆ. ಪಾಟೀಲ್ ಹೇಳಿದರು. ಪದಾಧಿಕಾರಿಗಳ ಚುನಾವಣಾ ಕಾರ್ಯಾಗಾರದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರು ಮಾ. 31ರಂದು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಅದಾದ ನಂತರ ರಾಜ್ಯದಲ್ಲಿ ನಾಲ್ಕೈದು
ಸಮಾವೇಶಗಳಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ ಎಂದರು.
Advertisement