Advertisement

Congress ಸರಕಾರದ ವಿರುದ್ಧ ಸದನದಲ್ಲಿ ಜಂಟಿ ಹೋರಾಟ: ನಿರ್ಧಾರ

12:00 AM Jul 13, 2024 | Team Udayavani |

ಬೆಂಗಳೂರು: ಭ್ರಷ್ಟಾಚಾರದಲ್ಲಿ ಸಿಲುಕಿರುವ ರಾಜ್ಯ ಸರಕಾರದ ವಿರುದ್ಧ ವಿಧಾನಮಂಡಲದ ಉಭಯ ಸದನಗಳಲ್ಲಿ ಇದೇ ಮೊದಲ ಬಾರಿಗೆ ಎನ್‌ಡಿಎ ಒಕ್ಕೂಟ ಹೋರಾಟ ನಡೆಸಲಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್‌.ಅಶೋಕ್‌ ತಿಳಿಸಿದರು.

Advertisement

ಬೆಂಗಳೂರಿನಲ್ಲಿ ನಡೆದ ಜಂಟಿ ಸಮನ್ವಯ ಸಮಿತಿ ಸಭೆಯ ಬಳಿಕ ಅವರು ಮಾತನಾಡಿ, ಎರಡು ಸದನದಲ್ಲಿ ಬಿಜೆಪಿ-ಜೆಡಿಎಸ್‌ ಜಂಟಿ ಹೋರಾಟ ನಡೆಸುತ್ತದೆ. ಎಲ್ಲ ವಿಚಾರವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ನಿರ್ಧರಿಸಲಾಗಿದೆ. ಮುಡಾ ಹಾಗೂ ವಾಲ್ಮೀಕಿ ಹಗರಣದಲ್ಲಿ ಸಿಲುಕಿರುವ ಸರಕಾರಕ್ಕೆ ಜನರು ಛೀ-ಥೂ ಎಂದು ಉಗಿಯುತ್ತಿದ್ದಾರೆ ಎಂದು ಟೀಕಿಸಿದರು.

ಇಂದಿನ ಸಭೆಯಲ್ಲಿ ಕೇಂದ್ರ ಸಚಿವರಾದ ಎಚ್‌.ಡಿ.ಕುಮಾರಸ್ವಾಮಿ, ಪ್ರಹ್ಲಾದ್‌ ಜೋಶಿ ಸೇರಿ ಹಿರಿಯ ನಾಯಕರು ಭಾಗವಹಿಸಿದ್ದರು. ಹೋರಾಟ ಸಂದರ್ಭದಲ್ಲಿ ನಡೆದ ತಳ್ಳಾಟ-ನೂಕಾಟದಿಂದ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಜ್ವರ ಬಂದಿದೆ. ಹೀಗಾಗಿ ಅವರು ಸಭೆಗೆ ಬಂದಿರಲಿಲ್ಲ. ನಾನು ಅವರ ಜತೆ ದೂರವಾಣಿಯಲ್ಲಿ ಚರ್ಚೆ ನಡೆಸುತ್ತೇನೆ. ಅಧಿವೇಶನದಲ್ಲಿ ಈ ಸರಕಾರವನ್ನು ಬಟಾಬಯಲು ಮಾಡುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಿದ್ದರಾಮಯ್ಯನವರು ನಮ್ಮ ವಿರುದ್ಧ 40 ಪರ್ಸೆಂಟ್‌ ಆರೋಪ ಮಾಡಿದ್ದರು. ಆದರೆ ಇವರು ದಲಿತರ ಹಣವನ್ನು 100 ಪರ್ಸೆಂಟ್‌ ಲೂಟಿ ಮಾಡಿದ್ದಾರೆ. ಮುಡಾ ಹಗರಣದಲ್ಲಿ ಖುದ್ದು ಸಿದ್ದರಾಮಯ್ಯನವರೇ ಸಿಲುಕಿದ್ದಾರೆ ಎಂದು ಆರೋಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next