Advertisement
ಸುದ್ದಿಗಾರರ ಜತೆ ಮಾತನಾಡಿದ ಅವರು, ಚಿಕ್ಕೋಡಿ ಲೋಕಸಭೆ ಟಿಕೆಟ್ ಕೈ ತಪ್ಪಿದ್ದಕ್ಕೆ ಯಾವುದೇ ಅಸಮಾಧಾನ ಇಲ್ಲ. ಪ್ರಧಾನಿ ಮೋದಿ ನಮ್ಮ ನಾಯಕರು. ನಾನು ಚಿಕ್ಕೋಡಿ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದೆ. ಆದರೆ ಟಿಕೆಟ್ ಕೈತಪ್ಪಿದ್ದರಿಂದ ನಿರಾಸೆಯಾಗಿಲ್ಲ. ಕಾರ್ಯಕರ್ತರ ನೋವು ಸ್ವಾಭಾವಿಕ. ಶೀಘ್ರ ಈ ನೋವನ್ನು ಬಿಜೆಪಿ ಸರಿಪಡಿಸಲಿದೆ. ಹಾಗೆಂದು ನಾವು ಪಕ್ಷದ ವಿರುದ್ಧ ಬಂಡಾಯ ಏಳುವ ಪ್ರಶ್ನೆಯೇ ಇಲ್ಲ. ಟಿಕೆಟ್ ಕೈತಪ್ಪಿದ್ದರಿಂದ ನನ್ನನ್ನು ಸಮಾಧಾನಪಡಿಸಲು ಪಕ್ಷದ ವರಿಷ್ಠರು ವಿಧಾನ ಪರಿಷತ್ ಸ್ಥಾನ ನೀಡುವ ಭರವಸೆ ನೀಡಿದ್ದಾರೆ ಎಂಬುದೆಲ್ಲಾ ಊಹಾಪೋಹ. ನನ್ನ ಜತೆ ಅಂತಹ ಯಾವುದೇ ಮಾತುಕತೆ ನಡೆದೇ ಇಲ್ಲ. ಬಿಜೆಪಿ ವರಿಷ್ಠರು ಸಹ ಈ ರೀತಿಯ ಆಫರ್ ಪ್ರಸ್ತಾಪ ಮಾಡಿಲ್ಲ ಎಂದರು.
Related Articles
– ರಮೇಶ ಕತ್ತಿ, ಮಾಜಿ ಸಂಸದ
Advertisement
ಸಹೋದರ ರಮೇಶ ಕತ್ತಿಗೆ ಟಿಕೆಟ್ ಸಿಗದೇ ಇರುವುದಕ್ಕೆ ಬೇಸರ ಇಲ್ಲ. ಅಣ್ಣಾಸಾಹೇಬ ಜೊಲ್ಲೆ ಅವರಿಗೆ ಟಿಕೆಟ್ ನೀಡಿದ್ದರಿಂದ ನಾವು ಬಂಡಾಯ ಏಳುವ ಪ್ರಶ್ನೆ ಇಲ್ಲ. ಬದಲಾಗಿ ಎರಡೂ ಕ್ಷೇತ್ರಗಳಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುತ್ತೇವೆ. ಸಹೋದರ ರಮೇಶ ಕಾಂಗ್ರೆಸ್ ಸೇರುವ ಮಾತು ಸತ್ಯಕ್ಕೆ ದೂರವಾದ ಮಾತು. ಅದು ಬರೀ ಊಹಾಪೋಹ. ನಾವು ಬಿಜೆಪಿಯಲ್ಲೇ ಇರುತ್ತೇವೆ.– ಉಮೇಶ ಕತ್ತಿ, ಶಾಸಕ