Advertisement

ಕುಟುಂಬದ ಜತೆ ಕಾಲ ಕಳೆದ ಜೋಶಿ

02:49 PM Apr 25, 2019 | Team Udayavani |

ಹುಬ್ಬಳ್ಳಿ: ಧಾರವಾಡ ಕ್ಷೇತ್ರದ ಲೋಕಸಭೆ ಮತದಾನ ಮುಗಿದ ಮರುದಿನವಾದ ಬುಧವಾರ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ನಿರಾಳರಾಗಿದ್ದರು. ಕುಟುಂಬ ಸದಸ್ಯರೊಂದಿಗೆ ಕಾಲ ಕಳೆದ ಅವರು ಪಕ್ಷದ ಕಾರ್ಯಕರ್ತರು, ಮುಖಂಡರೊಂದಿಗೆ ಚರ್ಚೆ ನಡೆಸಿದರು.

Advertisement

ಬುಧವಾರ ಬೆಳಗ್ಗೆ ಯೋಗ ಮಾಡಿ, ದಿನಪತ್ರಿಕೆಗಳನ್ನು ಓದಿದ ನಂತರ ಕುಟುಂಬ ಸದಸ್ಯರೊಂದಿಗೆ ಕೆಲ ಸಮಯ ಕಳೆದ ಅವರು, ಮಡದಿ-ಮಕ್ಕಳೊಂದಿಗೆ ಕುಳಿತು ಉಪಾಹಾರ ಸೇವನೆ ಮಾಡಿದರು. ಕುಟುಂಬದ ಸದಸ್ಯರಿಗೆ ತಾವೇ ಚಹಾ ಮಾಡಿ ಕೊಟ್ಟರುವುದು ವಿಶೇಷ. ನಂತರ ಮಧ್ಯಾಹ್ನ 12:00ಗಂಟೆ‌ವರೆಗೆ ಮನೆಯಲ್ಲಿ ಬಿಜೆಪಿ ಕಾರ್ಯಕರ್ತರ ಜತೆ ಚರ್ಚಿಸಿದರು. ವಿವಿಧ ಬೂತ್‌ಗಳಲ್ಲಿ ಮತದಾನ ಪ್ರಮಾಣ ಕುರಿತು ಮಾಹಿತಿ ಪಡೆದರು.

ನಂತರ ಆತ್ಮೀಯರಿಬ್ಬರ ಮದುವೆಗಳಲ್ಲಿ ಪಾಲ್ಗೊಂಡು ನವ ದಂಪತಿಗೆ ಶುಭ ಕೋರಿದರು. ಮಧ್ಯಾಹ್ನ 4:00 ಗಂಟೆಗೆ ಪಕ್ಷದ ಸ್ಥಳೀಯ ಮುಖಂಡರೊಂದಿಗೆ ಸಭೆ ನಡೆಸಿ ಮತಗಳ ಲೆಕ್ಕಾಚಾರ ನಡೆಸಿದರು.

ಏ.25ರಂದು ಬೆಂಗಳೂರಿನಲ್ಲಿ ನಡೆಯುವ ಪಕ್ಷದ ಕೋರ್‌ ಕಮಿಟಿ ಸಭೆಯಲ್ಲಿ ಪಾಲ್ಗೊಳ್ಳಲು ಸಂಜೆ 7:00ಗಂಟೆಯ ವಿಮಾನ ಮೂಲಕ ಬೆಂಗಳೂರಿಗೆ ತೆರಳಿದರು.

ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ರಿಲ್ಯಾಕ್ಸ್‌ ಮೂಡ್‌ನ‌ಲ್ಲಿದ್ದೇನೆ ಎಂದು ಹೇಳಲ್ಲ. ನಾನು ಸದಾ ಕಾರ್ಯ ಚಟುವಟಿಕೆಗಳಲ್ಲಿ ತೊಡಗಿಕೊಂಡ ವ್ಯಕ್ತಿ. ಬುಧವಾರ ಬೆಳಗ್ಗೆ ಸ್ವಲ್ಪ ತಡವಾಗಿ ಎದ್ದಿದ್ದೇನೆ. ಆದರೂ ಕಾರ್ಯಕರ್ತರು ನಿರಂತರವಾಗಿ ಬರುತ್ತಿದ್ದು, ಅವರೊಂದಿಗೆ ಚರ್ಚಿಸುತ್ತಿದ್ದೇನೆ ಎಂದರು.

Advertisement

ಒತ್ತಡ ಹೇರಿ ಶ್ರುತಿ ಬಂಧನ: ವಿನಯ ಕುಲಕರ್ಣಿ ಎಂ.ಬಿ. ಪಾಟೀಲ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮೇಲೆ ಒತ್ತಡ ಹೇರಿ, ಪಕ್ಷದ ಕಾರ್ಯಕರ್ತೆ ಶ್ರುತಿ ಬೆಳ್ಳಕ್ಕಿ ಅವರನ್ನು ಬಂಧಿಸಿದ್ದಾರೆ. ಲಿಂಗಾಯತ ಧರ್ಮ ಬಗ್ಗೆ ಪ್ರಚೋದನಕಾರಿ ಭಾಷಣ ಮಾಡಿದ್ದಾರೆಂದು ಆರೋಪಿಸಿ ಬಂಧನಕ್ಕೊಳಪಡಿಸಲಾಗಿದೆ. ಲಿಂಗಾಯತ ಧರ್ಮ ಕುರಿತು ಹಲವರು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ. ಅವರ ಮೇಲೂ ಕ್ರಮ ಕೈಗೊಳ್ಳಲು ಮುಂದಾಗಬೇಕು. ಚುನಾವಣೆ ಸಂದರ್ಭದಲ್ಲಿ ಚುನಾವಣಾ ಆಯೋಗ ಅಧಿಕಾರಿ ದೂರು ನೀಡಿದರೆ ಮಾತ್ರ ಕ್ರಮ ಕೈಗೊಳ್ಳಬೇಕು. ಆದರೆ ವೈಯಕ್ತಿಕವಾಗಿ ನೀಡಿದ ದೂರನ್ನಾಧರಿಸಿ ಬಂಧನ ಮಾಡಲಾಗಿದೆ ಎಂದು ಆರೋಪಿಸಿದರು.

ಮಹಿಳೆಯ ಬಂಧನದಿಂದ ದೊಡ್ಡ ಸಾಧನೆ ಮಾಡಿದ್ದೇವೆಂದು ವಿನಯ ಕುಲಕರ್ಣಿ ಹಾಗೂ ಸಚಿವ ಎಂ.ಬಿ.ಪಾಟೀಲ ತಿಳಿದಿದ್ದಾರೆ. ಪ್ರತ್ಯೇಕ ಧರ್ಮಕ್ಕಾಗಿ ನಡೆಸಿದ ಹೋರಾಟಕ್ಕೆ ಜನರು ತಕ್ಕ ಪಾಠ ಕಲಿಸಿದ್ದಾರೆ. ಮುಂದೆಯೂ ಕೂಡ ನಿಮಗೆ ಸೂಕ್ತ ಪಾಠ ಕಲಿಸುತ್ತಾರೆ. ಬಿಜೆಪಿ ಕಾನೂನಾತ್ಮಕ ಹಾಗೂ ರಾಜಕೀಯ ಹೋರಾಟ ನಡೆಸಲಿದೆ ಎಂದರು.

ಇಲ್ಲಿನ ಪೊಲೀಸ್‌ ವರಿಷ್ಠಾಧಿಕಾರಿ ಕಾಂಗ್ರೆಸ್‌ ಏಜೆಂಟರಂತೆ ವರ್ತಿಸುತ್ತಿದ್ದಾರೆ. ಅವರು ಅಧಿಕಾರ ದುರುಪಯೋಗ ಪಡಿಸಿಕೊಳ್ಳುತ್ತಿರುವುದು ಖಂಡನೀಯ ಎಂದು ನುಡಿದರು.

Advertisement

Udayavani is now on Telegram. Click here to join our channel and stay updated with the latest news.

Next