Advertisement

Journalism; ಪತ್ರಿಕೋದ್ಯಮ ವಡ್ಡರ್ಸೆ ರಘುರಾಮ ಶೆಟ್ಟಿ ಪ್ರಶಸ್ತಿಗೆ ಉಮಾಪತಿ ಆಯ್ಕೆ

12:05 AM Dec 06, 2024 | Team Udayavani |

ಬೆಂಗಳೂರು: ರಾಜ್ಯ ಸರಕಾರ ಈ ವರ್ಷ ಆರಂಭಿಸಿರುವ ವಡ್ಡರ್ಸೆ ರಘುರಾಮ ಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಚಿತ್ರದುರ್ಗ ಮೂಲದ ಡಿ. ಉಮಾಪತಿ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು 2 ಲಕ್ಷ ರೂ. ನಗದು ಮತ್ತು ಸ್ಮರಣಿಕೆ ಒಳಗೊಂಡಿದೆ ಎಂದು ವಾರ್ತಾ ಇಲಾಖೆ ಆಯುಕ್ತ ಹೇಮಂತ ಎಂ. ನಿಂಬಾಳ್ಕರ್‌ ತಿಳಿಸಿದ್ದಾರೆ.

Advertisement

ಪತ್ರಿಕೋದ್ಯಮದಲ್ಲಿ ಸಾಮಾಜಿಕ ನ್ಯಾಯ ಕುರಿತು ವರದಿ, ವಿಶೇಷ ಲೇಖನಗಳನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ 2024ರ ಆಯವ್ಯಯದಲ್ಲಿ ಹಿರಿಯ ಪತ್ರಕರ್ತ “ವಡ್ಡರ್ಸೆ ರಘುರಾಮ ಶೆಟ್ಟಿ’ ಹೆಸರಿನಲ್ಲಿ ಪ್ರಶಸ್ತಿ ಘೋಷಿಸಿದ್ದರು.

ಉಮಾಪತಿ ಅವರು ಹಲವು ಸಮೂಹ ಮಾಧ್ಯಮಗಳಲ್ಲಿ ಕೆಲಸ ಕಾರ್ಯ ನಿರ್ವಹಿಸಿದ್ದಾರೆ. ಪಾರ್ಲಿಮೆಂಟ್‌ ವರದಿ, ಚುನಾವಣೆ ವಿಶ್ಲೇಷಣೆಗಳು, ರಾಜತಾಂತ್ರಿಕ ವರದಿಗಾರಿಕೆಯಲ್ಲಿ ವಿಶಿಷ್ಟ ಅನುಭವ ಹೊಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next