Advertisement

ಹಿರಿಯ ಪತ್ರಕರ್ತ ಸಿ.ಎಸ್.ದ್ವಾರಕಾನಾಥ್ ಕಾಂಗ್ರೆಸ್ ಗೆ ಸೇರ್ಪಡೆ

01:26 PM Aug 20, 2021 | Team Udayavani |

ಬೆಂಗಳೂರು: ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ, ಹಿರಿಯ ಪತ್ರಕರ್ತ ಸಿ.ಎಸ್. ದ್ವಾರಕಾನಾಥ್ ಅವರು ಶುಕ್ರವಾರ ಕಾಂಗ್ರೆಸ್ ಪಕ್ಷಕ್ಕೆ ಸೇಪರ್ಡೆಯಾದರು.

Advertisement

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸಿ.ಎಸ್. ದ್ವಾರಕಾನಾಥ್ ಅವರನ್ನು ಪಕ್ಷಕ್ಕೆ ಬರ ಮಾಡಿಕೊಂಡರು.

ಇದನ್ನೂ ಓದಿ:ವಿದ್ಯುತ್ ಕೂಡಾ ಇಲ್ಲದ ಊರಿನಿಂದ ಬಂದ ನನಗೆ ಬಿಜೆಪಿ ಬಹಳಷ್ಟು ಕೊಟ್ಟಿದೆ: ಶೋಭಾ ಕರಂದ್ಲಾಜೆ

ದ್ವಾರಕಾನಾಥ್ ಅವರು ನ್ಯಾಯವಾದಿಯಾಗಿ, ಪ್ರಗತಿಪರ ಚಿಂತಕರಾಗಿ, ಪತ್ರಕರ್ತರಾಗಿ ಹೆಸರಾದವರು. ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ.

ರಾಜೀವ್ ಗಾಂಧಿ, ಅರಸು ಜನ್ಮದಿನ ಕಾರ್ಯಕ್ರಮ: ಪ್ರದೇಶ ಕಾಂಗ್ರೆಸ್ ಸಮಿತಿ ಇಂದು ಆಯೋಜಿಸಿದ್ದ ದಿವಂಗತ ರಾಜೀವ್ ಗಾಂಧಿ, ಮಾಜಿ‌ ಮುಖ್ಯಮಂತ್ರಿ, ದಿವಂಗತ ದೇವರಾಜ ಅರಸು ಅವರ ಜನ್ಮದಿನ ಕಾರ್ಯಕ್ರಮದಲ್ಲಿ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಭಾಗವಹಿಸಿ ಗೌರವ ಸಲ್ಲಿಸಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next