ಬೆಂಗಳೂರು: ಹಿರಿಯ ಪತ್ರಕರ್ತ ಪ್ರಸಾದ್ ಹೆಗಡೆ ಅನಾರೋಗ್ಯಕ್ಕೆ ತುತ್ತಾಗಿ ಶನಿವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
Advertisement
ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಚವತ್ತಿ ಮೂಲದ ಪ್ರಸಾದ್ ಹೆಗಡೆ (43) ಹಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು.
ರಾಜ್ಯದ ಪ್ರಮುಖ ಸುದ್ದಿವಾಹಿನಿಗಳಲ್ಲಿ ಔಟ್‌ಫುಟ್ ಚೀಫ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಮಾಧ್ಯಮ ಲೋಕದಲ್ಲಿ ಅಪಾರ ಅನುಭವ ಹೊಂದಿದ್ದರು.
ಮಿಮಿಕ್ರಿ, ಸಾಹಿತ್ಯ ಇತ್ಯಾದಿ ಚಟುವಟಿಕೆಗಳಲ್ಲಿ ಸಕ್ರೀಯವಾಗಿದ್ದರು. ಹುಟ್ಟೂರು ಚವತ್ತಿಯಲ್ಲಿ ಶನಿವಾರವೇ ಪ್ರಸಾದ್ ಅವರ ಅಂತ್ಯಕ್ರಿಯೆ ನೆರವೇರಿತು.