Advertisement
ಕೊಡಗು ಪತ್ರಕರ್ತರ ವೇದಿಕೆ, ಕೊಡಗು ಪತ್ರಿಕಾ ಭವನ ಟ್ರಸ್ಟ್, ಕೊಡಗು ಪ್ರಸ್ ಕ್ಲಬ್ ಮತ್ತು ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಕಾಲೇಜಿನ ಸಭಾಂಗಣದಲ್ಲಿ ನಡೆದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
Related Articles
Advertisement
ಪತ್ರಿಕಾ ದಿನಾಚರಣೆ ಎನ್ನುವುದು ಮಾಧ್ಯಮ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವವರು ತಮ್ಮಲ್ಲಿನ ತಪ್ಪು ಒಪ್ಪುಗಳನ್ನು ವಿಮರ್ಶಿಸಿಕೊಳ್ಳುವ ದಿನವಾಗಿದೆ. ಬದಲಾಗುತ್ತಿರುವ ಸಾಮಾಜಿಕ ಪರಿಸ್ಥಿತಿಗಳ ನಡುವೆ ಪತ್ರಿಕಾ ಕ್ಷೇತ್ರ ಸಾಕಷ್ಟು ಬೆಳೆದಿದ್ದು, ಇಂದಿನ ಸ್ಪರ್ಧಾತ್ಮಕ ವಾತಾವರಣದಲ್ಲಿ ವೇಗವಾಗಿ ಸುದ್ದಿ ಮುಟ್ಟಿಸುವ ತರಾತುರಿಯಲ್ಲಿ ತಮ್ಮ ತನವನ್ನು ಕಳೆದುಕೊಳ್ಳದಿರಿ ಎಂದು ಕಿವಿಮಾತು ಹೇಳಿದರು.
ಸಮಾಜದ ಕನ್ನಡಿಯಾಗಬೇಕುಒತ್ತಡ ಮತ್ತು ಆಮಿಷಗಳಿಗೆ ಪತ್ರಕರ್ತರು ಬಲಿ ಯಾಗದೆ, ಸಮಾಜದಲ್ಲಿ ಸಂಘರ್ಷಕ್ಕೆ ಎಡೆಮಾಡಿ ಕೊಡುವ ವರದಿಗಳನ್ನು ಬಿಟ್ಟು ಸತ್ಯಕ್ಕೆ ಸಮೀಪವಾದ ವರದಿಗಳನ್ನು ನೀಡುವುದು ಅಗತ್ಯವಾಗಿದೆ. ಪತ್ರಿಕೆಗಳು ಸಮಾಜದ ಕನ್ನಡಿಯಂತೆ ಕಾರ್ಯನಿರ್ವಹಿಸು ವಂತಾಗಬೇಕು ಎಂದು ರಮೇಶ್ ಹೇಳಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಕಾಲೇಜಿನ ಪ್ರಾಂಶುಪಾಲರಾದ ಪಾರ್ವತಿ ಅಪ್ಪಯ್ಯ ಮಾತನಾಡಿ, ಪತ್ರಿಕಾ ಸ್ವಾತಂತ್ರ್ಯಕ್ಕೆ ಧಕ್ಕೆ ಬಂದಲ್ಲಿ ಅಭಿವ್ಯಕ್ತಿ ಸ್ವಾತಂತ್ರÂಕ್ಕೆ ಧಕ್ಕೆ ಉಂಟಾದಂತೆ. ಸಮಾಜದ ಲೋಪ ದೋಷಗಳನ್ನು ತೋರಿಸಿಕೊಟ್ಟು ಅದನ್ನು ಸರಿಪಡಿಸುವ ನಿಟ್ಟಿನಲ್ಲಿ ಪತ್ರಿಕೆಗಳು ಪ್ರಜಾಪ್ರಭುತ್ವ ವ್ಯವಸ್ಥೆಗೆ ಅತ್ಯಂತ ಅನಿವಾರ್ಯವೆಂದರು. ಭಾಷಣದಲ್ಲಿ ವರ್ಷಾ ಪ್ರಥಮ
ಪತ್ರಿಕಾ ದಿನಾಚರಣೆಯ ಅಂಗವಾಗಿ ನೋಟಿನ ಅಪಮೌಲಿÂàಕರಣದಿಂದ ದೇಶದ ಮೇಲೆ ಉಂಟಾದ ಪರಿಣಾಮ ವಿಷಯದ ಕುರಿತು ಆಯೋಜಿತ ಭಾಷಣ ಸ್ಪರ್ಧೆಯಲ್ಲಿ ಮಡಿಕೇರಿ ಎಫ್ಎಂಕೆಂಸಿ ಕಾಲೇ ಜಿನ ವರ್ಷಾ ಟಿ.ಆರ್. ಪ್ರಥಮ, ವೀರಾಜಪೆೇಟೆ ಕಾವೇರಿ ಕಾಳೇಜಿನ ಗಗನ್ ಎಂ.ಜಿ. ದ್ವಿತೀಯ ಮತ್ತು ಅದೇ ಕಾಲೇಜಿನ ತಪ್ಸಿàನ ತೃತೀಯ ಸ್ಥಾನವನ್ನು ಪಡೆದು ಕೊಂಡರು. ಕೊಡಗು ಪತ್ರಿಕಾ ಭವನ ಟ್ರಸ್ಟ್‌ನ ಮ್ಯಾನೇಜಿಂಗ್ ಟ್ರಸ್ಟಿ ಬಿ.ಎನ್. ಮನುಶೆಣೈ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೊಡಗು ಪ್ರಸ್‌ಕ್ಲಬ್ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಉಪಸ್ಥಿತರಿದ್ದರು. ಕೊಡಗು ಪತ್ರಕರ್ತರ ವೇದಿಕೆ ಅಧ್ಯಕ್ಷ ಶ್ರೀಧರ ನೆಲ್ಲಿತ್ತಾಯ ಸ್ವಾಗತಿಸಿ, ಮಧೋಷ್ ಪೂವಯ್ಯ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿ ಶ್ವೇತಾ ವಂದಿಸಿದರು. ವನಮಹೋತ್ಸವ: ಪತ್ರಿಕಾ ದಿನದ ವೇದಿಕೆ ಕಾರ್ಯಕ್ರಮಗಳ ಬಳಿಕ ಕಾಲೆೇಜು ಆವರಣದಲ್ಲಿ ಗೋಣಿಕೊಪ್ಪಲು ಅರುವತ್ತೂಕ್ಲುವಿನ ಕಿಸಾನ್ ನರ್ಸರಿ ಅವರು ನೀಡಿದ ಗಿಡಗಳನ್ನು ಅತಿಥಿ ಗಣ್ಯರು ನೆಡುವ ಮೂಲಕ ವನಮಹೋತ್ಸವವನ್ನು ಆಚರಿಸಿದರು.