ನವದೆಹಲಿ: ಚೀನಾದೊಂದಿಗಿನ ಹಣಕಾಸಿನ ವ್ಯವಹಾರ ನಡೆಸಿರುವ ಆರೋಪದ ಮೇಲೆ ನ್ಯೂಸ್‌ಕ್ಲಿಕ್ ಪತ್ರಕರ್ತರು ಹಾಗು ಉದ್ಯೋಗಿಗಳ ಮನೆಗಳ ಮೇಲೆ ದೆಹಲಿ ವಿಶೇಷ ಪೋಲೀಸರ ತಂಡ ದಾಳಿ ನಡೆಸಿ ಶೋಧ ಕಾರ್ಯ ನಡೆಸುತ್ತಿದೆ ಎಂಬ ಅಂಶ ಬೆಳಕಿಗೆ ಬಂದಿದೆ.
ದೆಹಲಿ, ನೋಯ್ಡಾ ಮತ್ತು ಗಾಜಿಯಾಬಾದ್ ಸೇರಿದಂತೆ ಸುಮಾರು 30 ಕ್ಕೂ ಹೆಚ್ಚು ಸ್ಥಳಗಳಲ್ಲಿ ದೆಹಲಿ ವಿಶೇಷ ಪೊಲೀಸ್ ತಂಡ ದೊಡ್ಡ ಪ್ರಮಾಣದಲ್ಲಿ ದಾಳಿ ನಡೆಸಿದೆ ಎನ್ನಲಾಗಿದೆ.
ಸಂಸ್ಥೆ ವಿರುದ್ಧ ದೆಹಲಿ ಪೊಲೀಸ್ ವಿಶೇಷ ಘಟಕ ಕಾನೂನುಬಾಹಿರ ಚಟುವಟಿಕೆಗಳ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿದೆ.
ಚೀನಾದಿಂದ ಹಣ ಹೂಡಿಕೆಗೆ ಸಂಬಂಧಿಸಿದಂತೆ ಈಗಾಗಲೇ ಜಾರಿ ನಿರ್ದೇಶನಾಲಯವು ನ್ಯೂಸ್‌ಕ್ಲಿಕ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದು ಇದರ ಬೆನ್ನಲ್ಲೇ ಅಲ್ಲಿ ಕೆಲಸ ನಿರ್ವಹಿಸುತ್ತಿರುವ ಪತ್ರಕರ್ತರು ಹಾಗೂ ಕಚೇರಿ ಸಿಬಂದಿಗಳ ಮನೆಗಳ ಮೇಲೆ ದಾಳಿ ನಡೆಸಿದೆ.
ದಾಳಿ ನಡೆಸಿದ ತಂಡ ಮನೆಯಲ್ಲಿದ್ದ ಲ್ಯಾಪ್‌ಟಾಪ್‌ಗಳು, ಮೊಬೈಲ್ ಫೋನ್‌ಗಳು ಸೇರಿದಂತೆ ಎಲೆಕ್ಟ್ರಾನಿಕ್ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದೆ ಅಲ್ಲದೆ ಮನೆಯಲ್ಲಿದ್ದ ಹಾರ್ಡ್ ಡಿಸ್ಕ್ ನಲ್ಲಿದ್ದ ಡೇಟಾಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ: Inspiration: ಕೇವಲ 45,000 ರೂಪಾಯಿಯಲ್ಲಿ ರೋಲ್ಸ್ ರಾಯ್ಸ್ ಕಾರು ನಿರ್ಮಿಸಿದ ಕೇರಳದ ಯುವಕ