Advertisement

karnataka polls; ಸಿಎಂ ಬೊಮ್ಮಾಯಿ ಭರ್ಜರಿ ರೋಡ್ ಶೋ ; ಜೆ.ಪಿ.ನಡ್ಡಾ, ನಟ ಸುದೀಪ್ ಸಾಥ್

01:25 PM Apr 19, 2023 | Team Udayavani |

ಹಾವೇರಿ: ಶಿಗ್ಗಾವಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಮಪತ್ರ ಸಲ್ಲಿಸುವ ಸಂಬಂಧ ಏರ್ಪಡಿಸಿರುವ ರೋಡ್ ಶೋಗೆ ಜನಸಾಗರವೇ ಹರಿದು ಬಂದಿದೆ.

Advertisement

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಚಿತ್ರನಟ ಸುದೀಪ್ ಆಗಮನದ ಹಿನ್ನೆಲೆಯಲ್ಲಿ ಸಹಸ್ರಾರು ಜನರು ಪಾಲ್ಗೊಂಡಿದ್ದಾರೆ.

ಪಟ್ಟಣದ ಕಿತ್ತೂರು ಚನ್ನಮ್ಮ ಸರ್ಕಲ್‌ ನಲ್ಲಿ ಚನ್ನಮ್ಮ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ರೋಡ್ ಶೋ ಗೆ ಚಾಲನೆ ನೀಡಲಾಯಿತು.

ರೋಡ್ ಶೋ ಉದ್ದಕ್ಕೂ ಜೆ.ಪಿ.ನಡ್ಡಾ ಮತ್ತು ಚಿತ್ರನಟ ಸುದೀಪ್ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ಜನತೆಯತ್ತ ಕೈಬಿಸಿ ಗಮನ ಸೆಳೆದರು. ಸುಡು ಬಿಸಿಲನ್ನು ಲೆಕ್ಕಿಸದೆ ಕಿಚ್ಚ ಸುದೀಪ್ ಅವರನ್ನು ನೋಡಲು ಜನಸಾಗರವೇ ಹರಿದು ಬಂದಿತ್ತು. ಬಿಜೆಪಿ ಬಾವುಟ ಹಿಡಿದ ಕಾರ್ಯಕರ್ತರು ಸಿಎಂ ಬಸವರಾಜ ಬೊಮ್ಮಾಯಿ ಪರ ಜಯಘೋಷ ಕೂಗಿದರು. ಪಟ್ಟಣ ತುಂಬೆಲ್ಲ ಬಿಜೆಪಿ ಬಾವುಟಗಳು ರಾರಾಜಿಸುತ್ತಿದ್ದವು.

ಪಟ್ಟಣದ ಸಂತೆ ಮೈದಾನ, ಹಳೇ ಬಸ್ ನಿಲ್ದಾಣ ಮಾರ್ಗದ ಮೂಲಕ ತಾಲೂಕು ಕ್ರೀಡಾಂಗಣಕ್ಕೆ ಆಗಮಿಸಿದ ಮೆರವಣಿಗೆಯಲ್ಲಿ ಜಗ್ಗಲಿಗೆ ತಂಡ, ಜನಪದ ಕಲಾ ತಂಡಗಳು ಮತ್ತಷ್ಟು ಮೆರುಗು ನೀಡಿದವು.

Advertisement

ತಾಲ್ಲೂಕು ಕ್ರೀಡಾಂಗಣದಲ್ಲಿ ಮಧ್ಯಾಹ್ನ ಬಹಿರಂಗ ಸಮಾವೇಶ ನಡೆಯಲಿದ್ದು, ನಂತರ ತಹಶೀಲ್ದಾರ್ ಕಚೇರಿಗೆ ತೆರಳಿ ಸಿಎಂ ಬೊಮ್ಮಾಯಿ ನಾಮಪತ್ರ ಸಲ್ಲಿಸಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next