ಹೊಸದಿಲ್ಲಿ: ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಅವಧಿಯನ್ನು ಮತ್ತೊಂದು ವರ್ಷಕ್ಕೆ ಹೆಚ್ಚಿಸಲಾಗಿದೆ. 2024ರ ಲೋಕಸಭಾ ಚುನಾವಣೆಯವರೆಗೆ ನಡ್ಡಾ ಅವರೇ ಬಿಜೆಪಿ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಜೆಪಿ ನಡ್ಡಾ ಅವರ ಅಧಿಕಾರವಧಿಯನ್ನು 2024ರ ಜೂನ್ ವರೆಗೆ ಹೆಚ್ಚಿಸಲಾಗಿದೆ ಎಂದು ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಇದನ್ನೂ ಓದಿ:ಆಯ್ಕೆ ಸಮಿತಿಗೆ ಟಕ್ಕರ್: ರಣಜಿ ಟ್ರೋಫಿಯಲ್ಲಿ ಮತ್ತೊಂದು ಶತಕ ಸಿಡಿಸಿದ ಸರ್ಫರಾಜ್
ಜೆಪಿ ನಡ್ಡಾ ಅವರ ನಾಯಕತ್ವದಲ್ಲಿ ನಾವು ಬಿಹಾರದಲ್ಲಿ ಉತ್ತಮ ಸಾಧನೆ ಮಾಡಿದ್ದೆವು. ಮಹಾರಾಷ್ಟ್ರದಲ್ಲಿ ಎನ್ ಡಿಎಗೆ ಬಹುಮತ, ಉತ್ತರ ಪ್ರದೇಶದಲ್ಲಿ ಗೆಲುವು ಸಾಧಿಸಲು ಸಾಧ್ಯವಾಯಿತು. ಪಶ್ಚಿಮ ಬಂಗಾಳದಲ್ಲಿಯೂ ನಮ್ಮ ಸಂಖ್ಯೆ ಏರಿದೆ. ಅಲ್ಲದೆ ಗುಜರಾತ್ ನಲ್ಲಿ ಅಭೂತಪೂರ್ವ ವಿಕ್ರಮ ಸಾಧಿಸಿದ್ದೇವೆ ಎಂದು ಶಾ ಹೇಳಿದರು.
Related Articles
ಮುಂದಿನ ವರ್ಷದ ಲೋಕಸಭಾ ಚುನಾವಣೆಯ ಕುರಿತಾಗಿ ಮಾತನಾಡಿದ ಅಮಿತ್ ಶಾ, “ ನರೇಂದ್ರ ಮೋದಿ ಮತ್ತು ಜೆಪಿ ನಡ್ಡಾ ಅವರ ನಾಯಕತ್ವದಲ್ಲಿ ನಾವು 2024ರಲ್ಲಿ 2019ಕ್ಕಿಂತ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ” ಎಂದರು.