Advertisement

ಬೆಂಗಳೂರಿಗೆ ನಾಳೆ ಜೆ.ಪಿ.ನಡ್ಡಾ ಭೇಟಿ

11:05 PM Sep 20, 2019 | Team Udayavani |

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆ.ಪಿ.ನಡ್ಡಾ ಅವರು ಭಾನುವಾರ ಬೆಂಗಳೂರಿಗೆ ಆಗಮಿಸಲಿದ್ದು, ಅರಮನೆ ಮೈದಾನದಲ್ಲಿ ನಡೆಯುವ ಪ್ರಬುದ್ಧರ ಸಭೆಯಲ್ಲಿ ಪಾಲ್ಗೊಳ್ಳುವ ಜತೆಗೆ ಆಯ್ದ ಸಾಧಕರನ್ನು ಭೇಟಿಯಾಗಿ ಚರ್ಚಿಸಲಿದ್ದಾರೆ. ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸೇರಿದಂತೆ ಹಲವು ಸಚಿವರು, ಮುಖಂಡರು ಭಾಗವಹಿಸಲಿದ್ದು, 15,000ಕ್ಕೂ ಹೆಚ್ಚು ಮಂದಿ ಸಭೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.

Advertisement

ನಂತರ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಚಂದ್ರಶೇಖರ ಕಂಬಾರ, ಮಾಜಿ ಕ್ರಿಕೆಟಿಗ ರಾಹುಲ್‌ ದ್ರಾವಿಡ್‌ ಅವರನ್ನು ಭೇಟಿಯಾಗಿ ಚರ್ಚಿಸಲಿದ್ದಾರೆ. ಮಾಜಿ ಕೇಂದ್ರ ಸಚಿವ ದಿ. ಅನಂತ ಕುಮಾರ್‌ ಅವರ ಹುಟ್ಟುಹಬ್ಬದ ಪ್ರಯುಕ್ತ ಸಂಜೆ ಎನ್‌ಎಂಕೆಆರ್‌ವಿ ಕಾಲೇಜಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next