Advertisement

ದಾವಣಗೆರೆಯ ವಿವಿಧ ಮಠಗಳಿಗೆ ಭೇಟಿ ನೀಡಿದ ಜೆ.ಪಿ.ನಡ್ಡಾ

12:57 PM Jan 06, 2023 | Team Udayavani |

ದಾವಣಗೆರೆ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಶುಕ್ರವಾರ ದಾವಣಗೆರೆ ಜಿಲ್ಲೆಯ ವಿವಿಧ ಮಠಗಳಿಗೆ ಭೇಟಿ ನೀಡಿದರು.

Advertisement

ಹರಿಹರ ಹೊರ ವಲಯದ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಜಗದ್ಗುರು ಪೀಠಕ್ಕೆ ಭೇಟಿ ನೀಡಿದ ನಡ್ಡಾ ಶ್ರೀ ವಚನಾನಂದ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ವಚನಾನಂದ ಸ್ವಾಮೀಜಿ ನಡ್ಡಾ ಅವರ ಹಣೆಗೆ ವಿಭೂತಿ ಹಚ್ಚಿದರು.

ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲು, ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.  ಬಸವರಾಜ್, ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಜಿಲ್ಲಾ ಅಧ್ಯಕ್ಷ ಬಿ.ಸಿ. ಉಮಾಪತಿ, ಚಂದ್ರಶೇಖರ್ ಪೂಜಾರ್ ಇತರರು ಇದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next