Advertisement

ಇಂದಿನಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಎರಡು ದಿನಗಳ ಗೋವಾ ಪ್ರವಾಸ

03:30 PM Jul 24, 2021 | Team Udayavani |

ಪಣಜಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಗೋವಾಕ್ಕೆ ಎರಡು ದಿನಗಳ ಭೇಟಿಗಾಗಿ ಆಗಮಿಸಿದ್ದಾರೆ. ಗೋವಾ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷದ ಸ್ಥಳೀಯ ನಾಯಕರು ಮತ್ತು ಕಾರ್ಯಕರ್ತರನ್ನು ಭೇಟಿ ಮಾಡಿ ಅವರು ಸಭೆ ನಡೆಸಲಿದ್ದಾರೆ.

Advertisement

ಶನಿವಾರ ಗೋವಾ ದಾಬೋಲಿಂ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾರವರನ್ನು ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್, ಬಿಜೆಪಿ ಗೋವಾ ಪ್ರಭಾರಿ ಸಿ.ಟಿ ರವಿ ಮತ್ತು ಪಕ್ಷದ ರಾಜ್ಯ ನಾಯಕರು ಸ್ವಾಗತ ಕೋರಿದರು. ಶನಿವಾರ ಮತ್ತು ಭಾನುವಾರ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ರವರು ಸರಣಿ ಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ:ಕಾಣಕೋಣ ಪರ್ತಗಾಳಿ ಮಠಕ್ಕೆ ಭೇಟಿ ನೀಡಿ ಪ್ರಮೋದ ಸಾವಂತ್

ಜೆ.ಪಿ ನಡ್ಡಾರವರು ಭಾನುವಾರ ಬೆಳಿಗ್ಗೆ ಗೋವಾದ ಪ್ರಸಿದ್ಧ ಮಂಗೇಶಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ನಂತರ ಕುಂಡಯಿಯಲ್ಲಿರುವ ತಪೋಭೂಮಿಯ ಸಧ್ಗುರು ಬ್ರಹ್ಮೇಶಾನಂದ ಸ್ವಾಮೀಜಿಯವರನ್ನು ಭೇಟಿ ಮಾಡಿ ವನಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಪಣಜಿಯ ಡೊನ್ ಬೋಸ್ಕೊ ಶಾಲೆಯಲ್ಲಿರುವ ಕೋವಿಡ್ ವ್ಯಾಕ್ಸಿನೇಶನ್ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next