Advertisement

ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ಶಿಫಾರಸಿಗೆ ನಿರ್ಣಯ

06:44 AM Jan 21, 2019 | Team Udayavani |

ಬೆಂಗಳೂರು: ನಡೆದಾಡುವ ದೇವರು, ತುಮಕೂರು ಸಿದ್ಧಗಂಗಾ ಮಠದ ಶತಾಯುಷಿ ಶ್ರೀ ಶಿವಕುಮಾರ ಸ್ವಾಮೀಜಿಗೆ ಭಾರತ ರತ್ನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲು ಅಖೀಲ ಭಾರತ ವೀರಶೈವ ಮಹಾಸಭೆಯ ವಾರ್ಷಿಕ ಸರ್ವ ಸದಸ್ಯರ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

Advertisement

ಶನಿವಾರ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆಯಲ್ಲಿ ತರಳಬಾಳು ಕೇಂದ್ರದಲ್ಲಿ ನಡೆದ ವಾರ್ಷಿಕ ಸರ್ವ ಸದಸ್ಯರ ಸಭೆಯಲ್ಲಿ ಶ್ರೀ ಶಿವಕುಮಾರ ಸ್ವಾಮೀಜಿಗೆ ಭಾರತ ರತ್ನ ನೀಡುವಂತೆ ಶಿಫಾರಸು ಮಾಡಲು ನಿರ್ಣಯ ಮಂಡಿಸಲಾಗಿದ್ದು,

ಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಗಿದೆ ಎಂದು ಮಹಾಸಭೆ ಕಾರ್ಯದರ್ಶಿ ಎಚ್‌.ಎಂ.ರೇಣುಕಾ ಪ್ರಸನ್ನ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದೇ ವೇಳೆ, ಅನಾರೋಗ್ಯದಿಂದ ಬಳಲುತ್ತಿರುವ ಸ್ವಾಮೀಜಿಯವರು ಶೀಘ್ರ ಗುಣಮುಖರಾಗಲಿ ಎಂದು ಸಭೆಯಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು ಎಂದು ತಿಳಿಸಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next