Advertisement

ಜಡ್ಜ್ ನಾಗಪ್ರಸನ್ನರಿಂದ ಒಂದೇ ದಿನ 600 ಅರ್ಜಿಗಳ ವಿಚಾರಣೆ!

11:54 AM Jun 19, 2024 | Team Udayavani |

ಬೆಂಗಳೂರು: ಹೈಕೋರ್ಟ್‌ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಮಂಗಳವಾರ ಒಂದೇ ದಿನದ ಕಲಾಪದಲ್ಲಿ ಬರೋಬ್ಬರಿ 600 ಪ್ರಕರಣಗಳ ವಿಚಾರಣೆ ನಡೆಸಿದ್ದಾರೆ.

Advertisement

ಆರಂಭದಲ್ಲೇ ಅಷ್ಟೂ ವಿಚಾರಣೆ ಮಂಗಳವಾರ ನಡೆಸಲಾಗುತ್ತದೆ ಎಂದು ನಿಗದಿಪಡಿಸಲಾಗಿತ್ತು. ಅದರಂತೆಯೇ ಅಷ್ಟೂ ಅರ್ಜಿಗಳ ವಿಚಾರಣೆ ಯನ್ನು ಮಧ್ಯಾಹ್ನ 3 ಗಂಟೆ 56 ನಿಮಿಷಕ್ಕೆಲ್ಲ ಪೂರ್ಣಗೊಳಿಸಿ ಕಲಾಪ ಮುಗಿಸಿದರು. ನಿಗದಿಯಾಗಿದ್ದ 600 ಅರ್ಜಿಗಳ ಪೈಕಿ 180 ಅರ್ಜಿಗಳ ಸಂಬಂಧ ಮಧ್ಯಂತರ ಆದೇಶ ಮಾಡಿದ್ದಾರೆ. 87 ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿ ವಿಲೇವಾರಿ ಮಾಡಿದ್ದಾರೆ.

ನ್ಯಾ.ನಾಗಪ್ರಸನ್ನ ಅವರು ಕಳೆದ ಮಾ.22ರಂದು ಒಂದೇ ದಿನದ ಕಲಾಪದದಲ್ಲಿ 801 ಅರ್ಜಿಗಳನ್ನು ವಿಚಾರಣೆ ನಡೆಸಿದ್ದರು. ಅವುಗಳ ಪೈಕಿ 36 ಅರ್ಜಿಗಳ ಸಂಬಂಧ ಕಾಯ್ದಿರಿಸಿದ್ದ ತೀರ್ಪನ್ನು ಪ್ರಕಟಿಸಿದ್ದರು. ಉಳಿದಂತೆ ಸುಮಾರು 572 ಅರ್ಜಿಗಳನ್ನು ವಿಚಾರಣೆ ನಡೆಸಿ ಇತ್ಯರ್ಥಪಡಿಸಿದ್ದರು. ಇತ್ಯರ್ಥವಾದ ಪ್ರಕರಣಗಳಲ್ಲಿ 544 ಅರ್ಜಿಗಳು ಬೆಂಗಳೂರು ಜಲಮಂಡಳಿಗೆ ಸಂಬಂಧಿಸಿದ್ದಾಗಿದ್ದವು.

ಹಿಂದೆ 750 ಅರ್ಜಿ ವಿಲೇವಾರಿ: ಈ ಹಿಂದೆ ಹೈಕೋರ್ಟ್‌ ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ ಅವರು, ಒಂದೇ ದಿನದ ಕಲಾಪದಲ್ಲಿ ಸುಮಾರು 750 ಅರ್ಜಿಗಳನ್ನು ವಿಲೇವಾರಿ ಮಾಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next