ನವದೆಹಲಿ:ರೋಸ್ ಅವೆನ್ಯೂ ಕೋರ್ಟ್ ನ ಕಚೇರಿಯೊಳಗೆ ಮಹಿಳೆಯೊಂದಿಗೆ ರಾಸಲೀಲೆಯಲ್ಲಿ ತೊಡಗಿದ್ದ ನ್ಯಾಯಾಧೀಶರ ಕೃತ್ಯದ ವಿಡಿಯೋ ಬಹಿರಂಗಗೊಂಡಿದ್ದು, ಈ ಹಿನ್ನೆಲೆಯಲ್ಲಿ ಜಡ್ಜ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ರಾಷ್ಟ್ರೀಯ ಮಹಿಳಾ ಆಯೋಗ ಒತ್ತಾಯಿಸಿದೆ.
ಇದನ್ನೂ ಓದಿ:ಇಂದಿನ ರೌಡಿಗಳೇ ಮುಂದಿನ ಬಿಜೆಪಿ ನಾಯಕರು: ಕಾಂಗ್ರೆಸ್ ಟ್ವೀಟ್ ಗಳ ಅಸ್ತ್ರ
ನ್ಯಾಯಾಧೀಶರ ರಾಸಲೀಲೆಯ ವಿಡಿಯೋವನ್ನು ಸಾಮಾಜಿಕ ತಾಲಜಾಣ ಸೇರಿದಂತೆ ಯಾವುದೇ ವೆಬ್ ಸೈಟ್ ಗಳಲ್ಲಿ ಪ್ರಕಟಿಸದಂತೆ ದೆಹಲಿ ಹೈಕೋರ್ಟ್ ನಿರ್ಬಂಧ ವಿಧಿಸಿರುವುದಾಗಿ ವರದಿ ತಿಳಿಸಿದೆ.
ರೋಸ್ ಅವೆನ್ಯೂ ಕೋರ್ಟ್ ನ್ಯಾಯಾಧೀಶರ ಆಕ್ಷೇಪಾರ್ಹ ವಿಡಿಯೋ ವಿಷಯದ ಬಗ್ಗೆ ಮಾಧ್ಯಮಗಳ ವರದಿಯ ಮೂಲಕ ಗಮನಕ್ಕೆ ಬಂದಿರುವುದಾಗಿ ರಾಷ್ಟ್ರೀಯ ಮಹಿಳಾ ಆಯೋಗ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ಹೇಳಿದೆ.
“ಒಂದು ವೇಳೆ ಈ ಆರೋಪ ನಿಜ ಎಂದು ಸಾಬೀತಾದರೆ, ನ್ಯಾಯಾಧೀಶರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು” ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ದೆಹಲಿ ಹೈಕೋರ್ಟ್ ರಿಜಿಸ್ಟ್ರಾರ್ ಗೆ ಬರೆದ ಪತ್ರದಲ್ಲಿ ಒತ್ತಾಯಿಸಿದ್ದಾರೆ.
ಈ ಘಟನೆ ಬಗ್ಗೆ ರೋಸ್ ಅವೆನ್ಯೂ ಕೋರ್ಟ್ ನ ಆಂತರಿಕ ಸಮಿತಿಯನ್ನು ರಚಿಸಿ, ತನಿಖೆ ನಡೆಸಬೇಕೆಂದು ಮಹಿಳಾ ಆಯೋಗ ಮನವಿ ಮಾಡಿಕೊಂಡಿರುವುದಾಗಿ ವರದಿ ವಿವರಿಸಿದೆ.