Advertisement

15 PFI ಸದಸ್ಯರಿಗೆ ಗಲ್ಲು ಶಿಕ್ಷೆ ವಿಧಿಸಿದ್ದ ಜಡ್ಜ್ ಗೆ ಬೆದರಿಕೆ

12:49 AM Feb 02, 2024 | Team Udayavani |

ಅಲಪ್ಪುಳ: ಕೇರಳದ ಅಲಪ್ಪುಳದಲ್ಲಿ 3 ವರ್ಷಗಳ ಹಿಂದೆ ನಡೆದಿದ್ದ ಬಿಜೆಪಿ ನಾಯಕ ರಂಜಿತ್‌ ಶ್ರೀನಿವಾಸನ್‌ ಅವರನ್ನು ಹತ್ಯೆಗೈದ ಪ್ರಕರಣದಲ್ಲಿ ಅಪರಾಧಿಗಳಾದ 15 ಮಂದಿ ಪಿಎಫ್ಐ ಸದಸ್ಯರಿಗೆ ಗಲ್ಲು ಶಿಕ್ಷೆ ವಿಧಿಸಿದ್ದ ಮಾವೇಲಿಕ್ಕರ ಜಿಲ್ಲಾ ಹೆಚ್ಚುವರಿ ಸೆಷನ್ಸ್‌ ನ್ಯಾಯಾಧೀಶೆ ವಿ.ಜಿ. ಶ್ರೀದೇವಿಗೆ ಜೀವ ಬೆದರಿಕೆ ಒಡ್ಡಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ನ್ಯಾಯಾ ಧೀಶರಿಗೆ ಬೆದರಿಕೆಯನ್ನು ಒಡ್ಡಿ ಪೋಸ್ಟ್‌ಗಳನ್ನು ಹಾಕಲಾಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಕೇರಳ ರಾಜ್ಯ ಪೊಲೀಸರು, ನ್ಯಾಯಾಧೀ ಶರಿಗೆ ಸಬ್‌ ಇನ್‌ಸ್ಪೆಕ್ಟರ್‌ ನೇತೃತ್ವದಲ್ಲಿ ಭದ್ರತೆ ಒದಗಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next