Advertisement

ಆಸ್ಪತ್ರೆಗೆ ನ್ಯಾಯಾಧೀಶರ ದಿಢೀರ್‌ ಭೇಟಿ: ತರಾಟೆ

06:02 PM May 27, 2022 | Team Udayavani |

ಯಳಂದೂರು: ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಹಿರಿಯ ಸಿವಿಲ್‌ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಶ್ರೀಧರ್‌ ಗುರುವಾರ ದಿಢೀರ್‌ ಭೇಟಿ ನೀಡಿ ಇಲ್ಲಿನ ಅವ್ಯವಸ್ಥೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

Advertisement

ಕರ್ನಾಟಕ ಉಚ್ಚ ನ್ಯಾಯಾಲಯ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಭೇಟಿ ನೀಡಿರುವುದಾಗಿ ತಿಳಿಸಿದರು. ತಾಲೂಕಿನ ಆಸ್ಪತ್ರೆಯ ವಾರ್ಡ್‌ಗಳಿಗೆ ಭೇಟಿ ನೀಡಿ ರೋಗಿಗಳಿಂದ ಇಲ್ಲಿನ ಕುಂದು-ಕೊರತೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಆಸ್ಪತ್ರೆಯ ಆವರಣದಲ್ಲಿ ಅಶುಚಿತ್ವ ತಾಂಡವವಾಡುತ್ತಿದ್ದನ್ನು ಕಂಡು ಆಸ್ಪತ್ರೆಯ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು.

ನಂತರ ಔಷಧಿಯ ಉಗ್ರಾಣಕ್ಕೆ ಭೇಟಿ ನೀಡಿದ್ದರು. ಈ ವೇಳೆ ಉಗ್ರಾಣದಲ್ಲಿ ಅವಧಿ ಮೀರಿದ ಔಷಧಿಗಳ ದಾಸ್ತಾನುಗಳು ಇದ್ದದ್ದು ಕಂಡು ತಾಲೂಕು ಆರೋಗ್ಯಾಧಿಕಾರಿ ಡಾ. ಮಂಜುನಾಥ್‌ರನ್ನು ತರಾಟೆಗೆ ತೆಗೆದುಕೊಂಡರು. ಈ ಔಷಧಿಗಳನ್ನು ಇದುವರೆಗೂ ನಾಶಪಡಿಸದೆ ಇಲ್ಲೇ ಇಟ್ಟುಕೊಂಡಿರುವುದಕ್ಕೆ ಕಾರಣವೇನು? ಈ ಬಗ್ಗೆ ಇನ್ನೆರಡು ದಿನಗಳಲ್ಲಿ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ವರದಿ ನೀಡಬೇಕು.

ಕೂಡಲೇ ಕಾನೂನಿನ ಮಾನದಂಡಗಳನ್ನು ಬಳಸಿಕೊಂಡು ನಾಶಪಡಿಸಬೇಕು ಎಂದು ಸೂಚನೆ ನೀಡಿದರು. ಅಲ್ಲದೆ ಇಲ್ಲಿಗೆ ಮತ್ತೂಮ್ಮೆ ಅನಿರೀಕ್ಷಿತ ದಿಢೀರ್‌ ಭೇಟಿ ನೀಡಲಿದ್ದು ಅಲ್ಲಿಯವರೆಗೆ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಎಚ್ಚರಿಕೆ ನೀಡಿದರು. ಇದೇ ವೇಳೆ, ಲ್ಯಾಬ್‌, ಶಸ್ತ್ರ ಚಿಕಿತ್ಸಾ ಕೊಠಡಿ, ಸೇರಿದಂತೆ ಇಡೀ ಆಸ್ಪತ್ರೆಯನ್ನು ಪರಿಶೀಲನೆ ನಡೆಸಿ ಸಿಬ್ಬಂದಿಯಿಂದ ಮಾಹಿತಿ ಪಡೆದರು. ಒಳರೋಗಿಗಳ ಕೊಠಡಿಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದರು. ವೈದ್ಯಾಧಿಕಾರಿ ಡಾ. ಶ್ರೀಧರ್‌ ಇತರರು ಇದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next