Advertisement

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

01:21 AM Nov 26, 2024 | Team Udayavani |

ಹೊಸದಿಲ್ಲಿ: ಸಂವಿಧಾನದ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಮತ್ತು ಸಮಗ್ರತೆ ಪದಗಳನ್ನು ಸೇರಿಸಿದ 1976ರ ತಿದ್ದುಪಡಿಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ ಸೋಮವಾರ ವಜಾ ಮಾಡಿ ಮಹತ್ವದ ತೀರ್ಪು ನೀಡಿದೆ.

Advertisement

ಬರೋಬ್ಬರಿ 44 ವರ್ಷಗಳ ಬಳಿಕ ಈ ಅರ್ಜಿ ಸಲ್ಲಿಸಿರುವ ಬಗ್ಗೆ ಪ್ರಶ್ನಿಸಿದ ನ್ಯಾಯಪೀಠ, “ಸಮಾಜವಾದ, ಜಾತ್ಯತೀತ ಮತ್ತು ಸಮಗ್ರತೆ ಪದಗಳು ಸಂವಿಧಾನದ ಅವಿಭಾಜ್ಯ ಅಂಗಗಳಾಗಿವೆ’ ಎಂದು ಸ್ಪಷ್ಟಪಡಿಸಿದೆ.

ರಾಜ್ಯಸಭೆಯ ಮಾಜಿ ಸದಸ್ಯ ಸುಬ್ರಮಣಿಯನ್‌ ಸ್ವಾಮಿ, ವಕೀಲ ವಿಷ್ಣು ಶಂಕರ್‌ ಮತ್ತಿತರರು ಈ ಸಂಬಂಧ ಅರ್ಜಿ ಸಲ್ಲಿಸಿದ್ದರು. “ಸಮಾಜವಾದಿ ಮತ್ತು ಜಾತ್ಯತೀತ ಎಂಬ ಪದಗಳನ್ನು 1976ರ ತಿದ್ದುಪಡಿ ಮೂಲಕ ಸೇರಿಸಲಾಗಿದೆ ಮತ್ತು ಸಂವಿಧಾನವನ್ನು 1949ರಲ್ಲಿ ಅಂಗೀಕರಿಸಲಾಗಿದೆ ಎಂಬ ಅಂಶವು ಯಾವುದೇ ವ್ಯತ್ಯಾಸ ಉಂಟು ಮಾಡುವುದಿಲ್ಲ.

ಒಂದು ವೇಳೆ ಈ ತಿದ್ದುಪಡಿ ಕುರಿತು ವಿಚಾರಣೆಯನ್ನು ಅಂಗೀಕರಿಸಿದರೆ, ಈ ವಾದವು ಈ ಹಿಂದಿನ ಎಲ್ಲ ತಿದ್ದುಪಡಿಗಳಿಗೆ ಅನ್ವಯವಾಗುತ್ತಾ ಹೋಗುತ್ತದೆ’ ಎಂದು ಮುಖ್ಯ ನ್ಯಾಯಮೂರ್ತಿ ಸಂಜೀವ್‌ ಖನ್ನಾ, ನ್ಯಾ| ಸಂಜಯ್‌ ಕುಮಾರ್‌ ಅವರಿದ್ದ ಪೀಠ ಹೇಳಿದೆ. 1976ರಲ್ಲಿ ಅಂದಿನ ಇಂದಿರಾ ಗಾಂಧಿ ನೇತೃತ್ವದ ಸರಕಾರ, ಸಂವಿಧಾನಕ್ಕೆ 42ನೇ ತಿದ್ದುಪಡಿ ತಂದು ಈ 3 ಪದಗಳನ್ನು ಸೇರ್ಪಡೆ ಮಾಡಿತ್ತು.

Advertisement

Udayavani is now on Telegram. Click here to join our channel and stay updated with the latest news.

Next