Advertisement

BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ

04:21 PM Sep 21, 2024 | Team Udayavani |

ಬೆಂಗಳೂರು: ಅತ್ಯಾಚಾರ ಮತ್ತು ಕಿರುಕುಳದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ರಾಜರಾಜೇಶ್ವರಿನಗರ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಜನಪ್ರತಿನಿಧಿ ವಿಶೇಷ ನ್ಯಾಯಾಲಯ ಶನಿವಾರ (ಸೆ21 ) ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದೆ.

Advertisement

ಮುನಿರತ್ನ ವಿರುದ್ಧ 40 ವರ್ಷದ ಮಹಿಳೆಯೊಬ್ಬರು ಪ್ರಕರಣ ದಾಖಲಿಸಿದ ನಂತರ ಅತ್ಯಾಚಾರ ಮತ್ತು ಕಿರುಕುಳದ ಆರೋಪದ ಮೇಲೆ ಕಗ್ಗಲ್ಲಿಪುರ ಠಾಣೆ ಪೊಲೀಸರು ಬಂಧಿಸಿದ್ದರು. ಜನಪ್ರತಿನಿಧಿ ವಿಶೇಷ ನ್ಯಾಯಾಲಯದ ಏಕ ಪೀಠದ ನ್ಯಾಯಾಧೀಶ ಕೆ.ಎಂ.ಶಿವಕುಮಾರ್ ಮುಂದೆ ಮುನಿರತ್ನ ಅವರನ್ನು ಇಂದು ಹಾಜರುಪಡಿಸಲಾಯಿತು.

ಮುನಿರತ್ನ ವಿರುದ್ಧ ಮಹಿಳೆ ಬೆಂಗಳೂರು ಗ್ರಾಮಾಂತರದ ಕಗ್ಗಲ್ಲಿಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ನಂತರ ಎಫ್‌ಐಆರ್ ದಾಖಲಿಸಿ ತನಿಖೆ ಆರಂಭಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next