Advertisement
ಈ ನಡುವೆ ರಾಜ್ಯ ಸರಕಾರ ಪ್ರಕರಣದ ತನಿಖೆಯ ಹೊಣೆ ಯನ್ನು ಸಿಐಡಿಗೆ ಒಪ್ಪಿಸಿದೆ. ಸೋಮವಾರ ಸಿಐಡಿ ಅಧಿಕಾರಿಗಳು ಪ್ರಕರಣದ ತನಿಖೆ ಆರಂಭಿಸಲಿದ್ದು, ಬಾಡಿ ವಾರಂಟ್ ಪಡೆದು ಸೂರಜ್ ಅವರನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ.
ರಾಜ್ಯ ಸರಕಾರದ ಸೂಚನೆ ಮೇರೆಗೆ ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಆರ್. ಹಿತೇಂದ್ರ ಪ್ರಕರಣದ ವರ್ಗಾವಣೆಗೆ ಆದೇಶ ಹೊರಡಿಸಿದ್ದಾರೆ. ಹೊಳೇನರಸಿಪುರ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿರುವ ಕ್ರೈಂ ನಂಬರ್ 92/2024 ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದ್ದು, ಈ ಕೂಡಲೇ ಮುಂದಿನ ತನಿಖೆಗಾಗಿ ಪ್ರಕರಣದ ಎಲ್ಲ ಕಡತಗಳನ್ನು ಸಿಐಡಿ ಕಚೇರಿಗೆ ತೆರಳಿ, ಸಿಐಡಿಯ ಆರ್ಥಿಕ ಅಪರಾಧಗಳ ವಿಭಾಗದ ಹಿರಿಯ ಅಧಿಕಾರಿಗಳಿಗೆ ಹಸ್ತಾಂತರಿಸಬೇಕು ಎಂದು ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚಿಸಿದ್ದಾರೆ. ಹಾಸನ ಪೊಲೀಸರು ಆರೋಪಿ ಸೂರಜ್ ಸಮೇತ ಬೆಂಗಳೂರಿಗೆ ಕರೆತಂದಿದ್ದು, ರಾತ್ರಿ ತಡವಾಗಿದ್ದರಿಂದ ಸೋಮವಾರ ಪ್ರಕರಣದ ಎಲ್ಲ ಕಡತಗಳನ್ನು ಸಿಐಡಿ ಅಧಿಕಾರಿಗಳಿಗೆ ಹಸ್ತಾಂತರಿಸಲಿದ್ದಾರೆ.
Related Articles
ಸಂತ್ರಸ್ತೆಯ ಅಪಹರಣ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ರೇವಣ್ಣ ಬಂಧನಕ್ಕೆ ಒಳಗಾಗಿ 10 ದಿನ ಸೆರೆವಾಸ ಅನುಭವಿಸಿ, ಬಿಡುಗಡೆಯಾಗಿದ್ದಾರೆ. ಅವರ ದ್ವಿತೀಯ ಪುತ್ರ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ದ್ದಾರೆ. ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಬಂಧನ ಭೀತಿ ಎದುರಿಸುತ್ತಿದ್ದು, ಸದ್ಯ ನಿರೀಕ್ಷಣ ಜಾಮೀನು ಪಡೆದುಕೊಂಡಿದ್ದಾರೆ. ಈಗ ಮೊದಲ ಪುತ್ರ, ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅನೈಸರ್ಗಿಕ ಲೈಂಗಿಕ ಕ್ರಿಯೆ, ದೌರ್ಜನ್ಯ ಆರೋಪಡಿ ಬಂಧನಕ್ಕೆ ಒಳಗಾಗಿದ್ದಾರೆ. ಹೀಗೆ ರೇವಣ್ಣ ಕುಟುಂಬಕ್ಕೆ ಸಾಲು ಸಾಲು ಸಂಕಷ್ಟಗಳು ಎದುರಾಗಿವೆ.
Advertisement
ಸೂರಜ್ ರೇವಣ್ಣ ಬಗ್ಗೆ ನನ್ನಲ್ಲೇಕೆ ಕೇಳುತ್ತೀರಿ? ಈ ರೀತಿಯ ವಿಷಯ ಗಳಿಗೆ ನಾನು ಪ್ರತಿಕ್ರಿಯಿಸುವುದಿಲ್ಲ. ಕಾನೂನು ಅದರ ಕ್ರಮ ತೆಗೆದುಕೊಳ್ಳುತ್ತದೆ.-ಎಚ್.ಡಿ. ಕುಮಾರಸ್ವಾಮಿ, ಕೇಂದ್ರ ಸಚಿವ ನಮ್ಮ ಕುಟುಂಬದ ವಿರುದ್ಧ ರಾಜಕೀಯ ಷಡ್ಯಂತ್ರ ಮಾಡು ತ್ತಿದ್ದಾರೆ. ಹಾಸನದಲ್ಲಿ ವೈದ್ಯಕೀಯ ಪರೀಕ್ಷೆ ಮಾಡಿಸದೆ ಬೆಂಗಳೂರಿಗೆ ಯಾಕೆ ಕರೆ ತಂದರು? ಯಾರು ಷಡ್ಯಂತ್ರ ಮಾಡುತ್ತಿ ದ್ದಾರೆ ಎಂದು ಈಗ ಹೇಳುವುದಿಲ್ಲ. ಸಮಯ ಬಂದಾಗ ಹೇಳುತ್ತೇನೆ.
– ಎಚ್.ಡಿ. ರೇವಣ್ಣ, ಮಾಜಿ ಸಚಿವ