Advertisement

ಏ. 4ರವರೆಗೆ ನಲಪಾಡ್‌ಗೆ ನ್ಯಾಯಾಂಗ ಬಂಧನ

12:22 PM Mar 22, 2018 | Team Udayavani |

ಬೆಂಗಳೂರು: ಉದ್ಯಮಿ ಪುತ್ರ ವಿದ್ವತ್‌ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಆರೋಪಿ ಮೊಹಮ್ಮದ್‌ ನಲಪಾಡ್‌ ಹ್ಯಾರಿಸ್‌ಗೆ ಏಪ್ರಿಲ್‌ 4ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ 1ನೇ ಎಸಿಎಂಎಂ ನ್ಯಾಯಾಲಯ ಬುಧವಾರ ಆದೇಶಿಸಿತು.

Advertisement

ನಲಪಾಡ್‌ ನ್ಯಾಯಾಂಗ ಬಂಧನ ಮುಕ್ತಾಯಗೊಂಡಿದ್ದರಿಂದ ಬುಧವಾರ ಪೊಲೀಸರು, ಪರಪ್ಪನ ಅಗ್ರಹಾರ ಜೈಲಿನಿಂದಲೇ ವಿಡಿಯೋ ಕಾನ್ಫರೆನ್ಸ್‌ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಪ್ರಾಸಿಕ್ಯೂಶನ್‌ ಮನವಿ ಆಲಿಸಿದ ನ್ಯಾಯಾಲಯ, ಏಪ್ರಿಲ್‌ 4ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿತು.

ಫೆ. 17ರಂದು ರಾತ್ರಿ ಫ‌ರ್ಜಿ ಕೆಫೆಯಲ್ಲಿ ಉದ್ಯಮಿ ಲೋಕನಾಥ್‌ ಪುತ್ರ ವಿದ್ವತ್‌ ಮೇಲೆ ನಲಪಾಡ್‌ ಹಾಗೂ ಆತನ ಸಹಚರರು ಮಾರಣಾಂತಿಕ ಹಲ್ಲೆ ನಡೆಸಿದ್ದರು. ಈ ಪ್ರಕರಣ ಸಂಬಂಧ ಕಳೆದ ಒಂದು ತಿಂಗಳಿಂದ ನಲಪಾಡ್‌ ಜೈಲಿನಲ್ಲಿದ್ದು, ಹೈಕೋರ್ಟ್‌ನಲ್ಲಿಯೂ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ.

Advertisement

Udayavani is now on Telegram. Click here to join our channel and stay updated with the latest news.

Next