Advertisement

PSI ಹಗರಣದ ನ್ಯಾಯಾಂಗ ತನಿಖೆ ದ್ವೇಷದ ರಾಜಕಾರಣ: ಬೊಮ್ಮಾಯಿ ಟೀಕೆ

08:12 PM Jul 22, 2023 | Team Udayavani |

ಬೆಂಗಳೂರು: ಪಿಎಸ್‌ಐ ಹಗರಣವನ್ನು ನ್ಯಾಯಾಂಗ ತನಿಖೆಗೆ ವಹಿಸಿರುವುದು ದ್ವೇಷದ ರಾಜಕಾರಣ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಗರಣದಲ್ಲಿ ಕಾಂಗ್ರೆಸ್‌ನವರು ಇದ್ದಾರೆ. ಪ್ರಕರಣದ ತನಿಖೆ ನಡೆದು ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ. ಈ ಸಂದರ್ಭ ಮತ್ತೆ ತನಿಖೆಗೆ ಆದೇಶ ಮಾಡಿರುವುದು ದ್ವೇಷ ರಾಜಕೀಯವನ್ನು ತೋರಿಸುತ್ತದೆ ಎಂದರು.

Advertisement

ಪಿಎಸ್‌ಐ ಹಗರಣವನ್ನು ನಾವೇ ಹೊರಗೆ ತಂದು ಸಿಐಡಿ ತನಿಖೆಗೆ ಆದೇಶಿಸಿದ್ದೆವು. ಪ್ರಕರಣದಲ್ಲಿ ಎಡಿಜಿಪಿ ಹುದ್ದೆಯ ಅಧಿಕಾರಿಯನ್ನು ಜೈಲಿಗೆ ಕಳುಹಿಸಿದ್ದೇವೆ ಎಂದು ತಮ್ಮ ಅವಧಿಯಲ್ಲಿ ಕೈಗೊಂಡಿದ್ದ ಕ್ರಮಗಳನ್ನು ಅವರು ಸಮರ್ಥಿಸಿಕೊಂಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಯವರು ಗೋಡ್ಸೆ ಪ್ರತಿಮೆ ಮುಂದೆ ಪ್ರತಿಭಟನೆ ಮಾಡಲಿ ಅಂತ ಹೇಳಿದ್ದಾರೆ. ನಕಲಿ ಗಾಂಧಿಗಳ ಜಪ ಮಾಡುತ್ತಿರುವವರು ಕಾಂಗ್ರೆಸ್‌ನವರು. ಗಾಂಧೀಜಿ ಅವರನ್ನು ಹೆಚ್ಚು ದುರುಪಯೋಗ ಮಾಡಿಕೊಂಡವರು ಕಾಂಗ್ರೆಸ್‌ನವರು. ಕಾಂಗ್ರೆಸ್‌ನವರಿಗೆ ದೇಶ ಆಳಲು ಬರುವುದಿಲ್ಲ ಎಂಬ ಕಾರಣಕ್ಕಾಗಿ ಸ್ವಾತಂತ್ರ್ಯದ ಬಳಿಕ ಕಾಂಗ್ರೆಸ್ಸನ್ನು ವಿಸರ್ಜಿಸಲು ಗಾಂಧೀಜಿ ಹೇಳಿದ್ದರು. ಆದರೆ ಇವರು ಗಾಂಧೀಜಿ ಹೆಸರು ಹೇಳಿಕೊಂಡು ರಾಜಕಾರಣ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಸಿದ್ದು ಸರಕಾರದಿಂದ ಬೆಲೆ ಏರಿಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರ ಬಂದ ಮೇಲೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನರ ಜೀವನ ದುಸ್ತರವಾಗಿದೆ. ಕಾಂಗ್ರೆಸ್‌ ಸರಕಾರ ಬಂದ ಕೂಡಲೇ ವಿದ್ಯುತ್‌ ದರವನ್ನು ಹೆಚ್ಚಿಸಿದರು. ಎಲ್ಲ ತರಕಾರಿ ಬೆಲೆಯೂ ಹೆಚ್ಚಿದೆ. ಈಗ ಹಾಲಿನ ದರ ಹೆಚ್ಚಳ ಮಾಡಿ¨ªಾರೆ. ಆಗಸ್ಟ್‌ 1ರ ಬಳಿಕ ಸೈಟ್‌, ಕಾರು, ಹೊಸ ಮನೆ ಖರೀದಿ ದರವೂ ಹೆಚ್ಚಳವಾಗಲಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next