Advertisement

ಜು.14ರಂದು ಕೇಂದ್ರ ವಿತ್ತ ಸಚಿವೆ ಉಡುಪಿಗೆ; ಪ್ರಬುದ್ಧರ ಗೋಷ್ಠಿಯಲ್ಲಿ ಭಾಗಿ: ಕುಯಿಲಾಡಿ

05:27 PM Jul 12, 2023 | Team Udayavani |

 ಉಡುಪಿ: ಜು.14ರಂದು ಬೆಳಿಗ್ಗೆ 11.00 ಗಂಟೆಗೆ ಮಣಿಪಾಲದ ಹೋಟೆಲ್ ಕಂಟ್ರಿ ಇನ್ ಸಭಾಂಗಣದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ 9 ವರ್ಷಗಳ ಸಾಧನೆ ಮತ್ತು ಪ್ರಬುದ್ಧರ ಗೋಷ್ಠಿಯನ್ನುದ್ದೇಶಿಸಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರವರು ಮಾತನಾಡಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದರು.

Advertisement

ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಬಿಜೆಪಿ ಉಡುಪಿ ನಗರ ಮಂಡಲದ ಸಭೆಯಲ್ಲಿ ಭಾಗವಹಿಸಿ, ‘ಮಹಾ ಸಂಪರ್ಕ ಅಭಿಯಾನ’ದ ಕರ ಪತ್ರವನ್ನು ಬಿಡುಗಡೆಗೊಳಿಸಿ ಮಾತನಾಡಿದರು.

 

Advertisement

Udayavani is now on Telegram. Click here to join our channel and stay updated with the latest news.

Next