Advertisement

Bhovi Community ಜು. 20ಕ್ಕೆ ದೀಕ್ಷಾ ರಜತ ಮಹೋತ್ಸವ: ಲಿಂಬಾವಳಿ

09:33 PM Jul 02, 2024 | Team Udayavani |

ಬೆಂಗಳೂರು: ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ದೀಕ್ಷೆ ಸ್ವೀಕರಿಸಿ 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಭೋವಿ ಸಮುದಾಯ ಜು.20ರಂದು ದೀಕ್ಷಾ ರಜತ ಮಹೋತ್ಸವವನ್ನು ಹಮ್ಮಿಕೊಂಡಿದೆ.

Advertisement

ಅಂದು ಬೆಳಗ್ಗೆ 11ಕ್ಕೆ ಚಿತ್ರದುರ್ಗದಲ್ಲಿ ಈ ರಜತ ಮಹೋತ್ಸವವನ್ನು ಆಯೋಜಿಸಲಾಗಿದೆ. ಮಂತ್ರಾಲಯದ ಸುಭುದೇಂದ್ರ ತೀರ್ಥರು ಆಶೀರ್ವಚನ ನೀಡಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕೆಲ ಗ್ರಂಥಗಳನ್ನು ಲೋಕಾರ್ಪಣೆಗೊಳಿಸಲಿದ್ದಾರೆ.

ಕೇಂದ್ರ ಸಚಿವರಾದ ಎಚ್‌.ಡಿ.ಕುಮಾರಸ್ವಾಮಿ, ಪ್ರಹ್ಲಾದ ಜೋಶಿ, ಶೋಭಾ ಕರಂದ್ಲಾಜೆ, ವಿ.ಸೋಮಣ್ಣ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಮಾಜಿ ಸಚಿವ ಅರವಿಂದ ಲಿಂಬಾವಳಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸಚಿವ ಶಿವರಾಜ ತಂಗಡಗಿ ಮಾತನಾಡಿ, ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ)ಕ್ಕೆ ಮೊದಲ ಬಾರಿ ಸಮಾಜದಿಂದ ಓರ್ವರನ್ನು ಸದಸ್ಯರನ್ನಾಗಿ ಸರ್ಕಾರ ನೇಮಿಸಿದೆ. ಇದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರನ್ನು ಸನ್ಮಾನಿಸಲಾಗುವುದು. ಅಲ್ಲದೆ, ಯುಪಿಎಸ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದವರನ್ನು ಅಭಿನಂದಿಸಲಾಗುವುದುಎಂದರು. ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್‌. ರವಿಕುಮಾರ್‌, ಮಾಜಿ ಶಾಸಕ ನಾಗರಾಜ್‌ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next