Advertisement

ಕರಾವಳಿಯಲ್ಲಿ ಮುಂದುವರಿದ ಮಳೆ: ಜು. 5 ರಂದು ಉಡುಪಿ, ದಕ್ಷಿಣಕನ್ನಡದಲ್ಲಿ ರೆಡ್ ಅಲರ್ಟ್…

07:21 PM Jul 04, 2023 | Team Udayavani |

ಮಂಗಳೂರು/ ಉಡುಪಿ: ಜಿಲ್ಲೆಯಾದ್ಯಂತ ಕಳೆದೆರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಜುಲೈ 5 ರಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಯನ್ನು ಹವಾಮಾನ ಇಲಾಖೆ ನೀಡಿದ್ದು ರೆಡ್ ಅಲರ್ಟ್ ಘೋಷಣೆ ಮಾಡಿದೆ.

Advertisement

ಅದರಂತೆ ಬುಧವಾರದಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದ ಜಿಲ್ಲೆಯ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಬಿರುಗಾಳಿ ಸಾಧ್ಯತೆ: ಮುಂದಿನ 24 ಗಂಟೆಗಳಲ್ಲಿ ಕರಾವಳಿಯಲ್ಲಿ ಗಂಟೆಗೆ 40 ರಿಂದ 55 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದ್ದು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಿದೆ.

ವಿಧ್ಯಾರ್ಥಿಗಳ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಅವಶ್ಯಕತೆ ಇರುವ ಕಡೆಗಳಲ್ಲಿ ರಜೆಯನ್ನು ಘೋಷಿಸುವ ಕುರಿತು ಕ್ರಮವಹಿಸುವಂತೆ ತಾಲೂಕು ತಹಶೀಲ್ದಾದರು ಮತ್ತು ಕ್ಷೇತ್ರ ಶಿಕ್ಷಾಣಾಧಿಕಾರಿಗಳಿಗೆ ನಿರ್ದೇಶಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್‌ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next