Advertisement

ಮಳೆ ಹಾನಿ ಪ್ರದೇಶಕ್ಕೆ ದೌಡಾಯಿಸಿ

09:18 PM Jul 16, 2021 | Team Udayavani |

ಕಲಬುರಗಿ: ಜಿಲ್ಲೆಯಲ್ಲಿ ಮಳೆ ಮುಂದುವರೆಯುವ ಮುನ್ಸೂಚನೆ ಇದ್ದು, ಜು.19ರವರೆಗೆ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಆದ್ದರಿಂದ ಸಂಭಾವ್ಯ ಪ್ರವಾಹ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಸನ್ನದ್ಧ ಸ್ಥಿತಿಯಲ್ಲಿ ಇರಬೇಕೆಂದು ಸಂಸದ ಡಾ| ಉಮೇಶ ಜಾಧವ ಹೇಳಿದರು.

Advertisement

ನಗರದ ಜಿಲ್ಲಾಧಿ ಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ತುರ್ತುಸಭೆ ನಡೆಸಿದ ಅವರು, ಪ್ರವಾಹ ಎದುರಿಸಲು ಕೈಗೊಂಡ ಕ್ರಮಗಳ ಬಗ್ಗೆ ಜಿಲ್ಲಾಡಳಿತದಿಂದ ಮಾಹಿತಿ ಪಡೆದರು. ಮಳೆಯಿಂದ ಕೇವಲ ನದಿಪಾತ್ರದ ಗ್ರಾಮಗಳಲ್ಲಿ ಪ್ರವಾಹ ಬಂದು ಸಮಸ್ಯೆ ಎದುರಾಗಲ್ಲ

. ಕಲಬುರಗಿ ಮಹಾನಗರದ ವಿವಿಧ ಪ್ರದೇಶಗಳಲ್ಲಿಯೂ ಸಮಸ್ಯೆಗಳು ಎದುರಾಗುವ ಸಾಧ್ಯತೆಗಳಿವೆ. ಇಂತಹ ಸಂದರ್ಭದಲ್ಲಿ ನಗರದ ವಿವಿಧ ಕೊಳಚೆ ಪ್ರದೇಶ ಹಾಗೂ ಗುಡಿಸಲಲ್ಲಿ ವಾಸಿಸುವ ಜನರ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಬೇಕೆಂದು ಪಾಲಿಕೆ ಆಯುಕ್ತರಾದ ಸ್ನೇಹಲ್‌ ಸುಧಾಕರ್‌ ಲೋಖಂಡೆ ಅವರಿಗೆ ಸೂಚಿಸಿದರು. ಸ್ಲಂ ನಿವಾಸಿಗಳ ಆರೋಗ್ಯ ಸ್ಥಿತಿಗತಿ ಕುರಿತು ಶೀಘ್ರವೇ ಆರೋಗ್ಯ ಇಲಾಖೆ ಮತ್ತು ಮಹಾನಗರ ಪಾಲಿಕೆ ಜಂಟಿಯಾಗಿ ವರದಿ ನೀಡಬೇಕು. ಮಳೆ ಬಂದಾಗ ನಗರ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಒಳಚರಂಡಿ ಸಮಸ್ಯೆ ಆಗದಂತೆ, ಮಳೆ ನೀರು ಸುಗಮವಾಗಿ ಹರಿದು ಹೋಗುವಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಭಾರೀ ಮಳೆಯಿಂದ ಮನೆಗಳು ಬಿದ್ದರೆ ತಕ್ಷಣವೇ ಅಧಿ ಕಾರಿಗಳು ಸ್ಥಳಕ್ಕೆ ದೌಡಾಯಿಸಿ ಸಾರ್ವಜನಿಕರ ನೆರವಿಗೆ ಸ್ಪಂದಿಸಬೇಕು. ಜತೆಗೆ ಬೆಳೆ ಹಾನಿ ಬಗ್ಗೆ ರೈತರು ಸಮಸ್ಯೆ ಹೇಳುವ ಮುನ್ನವೇ ಅ ಧಿಕಾರಿಗಳು ರೈತರ ಬಳಿಗೆ ತೆರಳಿ, ಪರಿಸ್ಥಿತಿ ಅವಲೋಕಿಸಬೇಕು. ಬೆಳೆ ವಿಮೆ ಮುಂತಾದ ರೈತರ ಅಹವಾಲುಗಳಿಗೆ ತೊಡಕಾಗದಂತೆ ಅಧಿ ಕಾರಿಗಳು ನೋಡಿಕೊಂಡು ಕಾರ್ಯಪ್ರವೃತ್ತರಾಗಬೇಕು ಎಂದು ಸಲಹೆ ಮಾಡಿದರು. ಪ್ರವಾಹ ಸಂದರ್ಭದಲ್ಲಿ ಸಾರ್ವಜನಿಕರಿಂದ ಮಾಹಿತಿ ಪಡೆದು ನೆರವಿಗೆ ಧಾವಿಸಲು ಜಿಲ್ಲಾಡಳಿತದಿಂದ ಈಗಾಗಲೇ ಸ್ಥಾಪಿಸಿರುವ ಸಹಾಯವಾಣಿ ಮತ್ತಷ್ಟು ಚುರುಕಾಗಿ ಕೆಲಸ ಮಾಡಬೇಕು ಎಂದರು. ಡಿಸಿ ವಾಸಿರೆಡ್ಡಿ ವಿಜಯಾ ಜ್ಯೋತ್ಸಾ° ಮಾತನಾಡಿ, ಪ್ರವಾಹ ಎದುರಿಸಲು ಸೂಕ್ತ ಸಿದ್ಧತೆ ಮಾಡಿಕೊಳ್ಳಲಾಗಿದೆ. ನದಿ ಪಾತ್ರದ ಗ್ರಾಮಗಳನ್ನು ಈಗಾಗಲೇ ಗುರುತಿಸಲಾಗಿದೆ ಎಂದರು. ಕಾಲುವೆಗಳಿಂದ ಸುಗಮವಾಗಿ ನೀರು ಹರಿದು ಹೋಗುವಂತೆ ಸ್ವತ್ಛಗೊಳಿಸಲಾಗಿದೆ. ಪ್ರವಾಹ ಎದುರಾದರೆ ರಕ್ಷಣೆಗೆಂದು ಪ್ರತಿ ತಾಲೂಕಿನಲ್ಲಿ ಅಗ್ನಿಶಾಮಕ ದಳ ಸಿಬ್ಬಂದಿಯೊಂದಿಗೆ ಸ್ವಯಂ ಸೇವಕರು ಇರಲಿದ್ದು, ಅವರಿಗೆ ಈಗಾಗಲೇ ತರಬೇತಿ ನೀಡಿ, ರಕ್ಷಣಾ ಉಪಕರಣಗಳನ್ನು ಒದಗಿಸಲಾಗಿದೆ ಎಂದರು.

ಸಭೆಯಲ್ಲಿ ನಗರ ಪೊಲೀಸ್‌ ಆಯುಕ್ತ ಡಾ| ವೈ.ಎಸ್‌.ರವಿಕುಮಾರ, ಜಿಲ್ಲಾ ಪೊಲೀಸ್‌ ವರಿಷ್ಠಾ ಧಿಕಾರಿ ಡಾ| ಸಿಮಿ ಮರಿಯಂ ಜಾರ್ಜ್‌, ಅಪರ ಜಿಲ್ಲಾ ಧಿಕಾರಿ ಡಾ| ಶಂಕರ ವಣಿಕ್ಯಾಳ ಹಾಗೂ ಕೃಷಿ, ನೀರಾವರಿ, ಆರೋಗ್ಯ ಇಲಾಖೆ, ಅಗ್ನಿಶಾಮಕ ದಳದ ಅಧಿ ಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅ ಧಿಕಾರಿಗಳು ಪಾಲ್ಗೊಂಡಿದ್ದರು.

Advertisement

 

Advertisement

Udayavani is now on Telegram. Click here to join our channel and stay updated with the latest news.

Next