Advertisement

ಜೂ. 21: ಎಲ್ಲ ಶಾಲೆಗಳಲ್ಲಿ ಯೋಗ ದಿನ ಆಚರಣೆಗೆ ಸೂಚನೆ

11:22 AM Jun 18, 2022 | Team Udayavani |

ಬೆಂಗಳೂರು: ಎಲ್ಲ ಶಾಲೆಗಳಲ್ಲಿ ಜೂ. 21ರಂದು ಅಂತಾರಾಷ್ಟ್ರೀಯ ಯೋಗ ದಿನ ಆಚರಿಸುವಂತೆ ಆದೇಶಿಸಿ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

Advertisement

ಅಂದು ಅರ್ಧ ದಿನ ಶಾಲೆ ನಡೆಸಿ, ಅದರ ಬದಲಿಗೆ ಜೂ. 25ರ ಶನಿವಾರ ಪೂರ್ಣ ದಿನ ಶಾಲೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಇಲಾಖೆ ಸೂಚಿಸಿದೆ.

ಸ್ಥಳೀಯ ಚುನಾಯಿತ ಜನಪ್ರತಿನಿಧಿಗಳು, ಅಧಿಕಾರಿಗಳು, ಎಸ್‌ಡಿಎಂಸಿ ಸದಸ್ಯರು, ಶಿಕ್ಷಕರು ಮತ್ತು ಸ್ಥಳೀಯ ಯೋಗ ಸಂಸ್ಥೆಗಳ ಸಹಕಾರದೊಂದಿಗೆ ಯೋಗ ದಿನವನ್ನು ಅರ್ಥಪೂರ್ಣವಾಗಿ ಆಚರಿಸಬೇಕು.

ಮೊದಲ ಒಂದೂವರೆ ತಾಸಿನ ಅವಧಿಯಲ್ಲಿ ವಿದ್ಯಾರ್ಥಿಗಳ ವಯಸ್ಸಿಗೆ ಅನುಗುಣವಾದ ಯೋಗಾಸನ ಪ್ರದರ್ಶನ ಹಮ್ಮಿಕೊಳ್ಳಬೇಕು ಎಂದು ಇಲಾಖೆ ಸೂಚನೆ ನೀಡಿದೆ.

 

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next