Advertisement

ಜೂನ್‌ ಆರಂಭದಲ್ಲೇ ರಾಜ್ಯಕ್ಕೆ ಪ್ರವೇಶಿಸಲಿದೆ ಮುಂಗಾರು : ಹವಾಮಾನ ಇಲಾಖೆ

07:38 PM May 19, 2021 | Team Udayavani |

ಬೆಂಗಳೂರು : ನೈಋತ್ಯ ಮಾನ್ಸೂನ್‌ ಮಾರುತ ಮೇ 31ಕ್ಕೆ ಕೇರಳವನ್ನು ಪ್ರವೇಶಿಸಲಿದ್ದು, ಜೂನ್‌ ಮೊದಲ ವಾರ ಕರ್ನಾಟಕದಲ್ಲಿ ಮುಂಗಾರು ಮಳೆ ಪ್ರಾರಂಭವಾಗಲಿದೆ. ಜೂನ್‌ 5 ಅಥವಾ 6ರ ವೇಳೆಗೆ ರಾಜ್ಯಕ್ಕೆ ಮುಂಗಾರು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Advertisement

ಮೇ 21ಕ್ಕೆ ಅಂಡಮಾನ್‌ ಮತ್ತು ನಿಕೋಬಾರ್‌ ದ್ವೀಪ ಪ್ರದೇಶ ಹಾಗೂ ಬಂಗಾಳಕೊಲ್ಲಿಯ ದಕ್ಷಿಣ ಭಾಗಗಳಲ್ಲಿ ಮಳೆ ಬೀಳಲಿದೆ. ಅಂಡಮಾನ್‌ ಮತ್ತು ನಿಕೋಬಾರ್‌ ದ್ವೀಪ ಪ್ರದೇಶಗಳಲ್ಲಿ ಮೇ 21ರ ವೇಳೆಗೆ ಮಾನ್ಸೂನ್‌ ಮಾರುತಗಳ ಪ್ರವೇಶವಾಗಲಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ವಿಭಾಗದ ನಿರ್ದೇಶಕ ಸಿ.ಎಸ್‌. ಪಾಟೀಲ್‌ ತಿಳಿಸಿದರು.

ಮಾನ್ಸೂನ್‌ ಮಾರುತಗಳ ತೀವ್ರತೆಯ ಆಧಾರದ ಮೇಲೆ ರಾಜ್ಯಕ್ಕೆ ಮುಂಗಾರು ಮಳೆ ಪ್ರವೇಶ ತಿಳಿಯಲಿದೆ. ರಾಜ್ಯದ ಕರಾವಳಿ ಭಾಗಕ್ಕೆ ಜೂನ್‌ ಮೊದಲ ವಾರದೊಳಗೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ. ಮೇ 23ರ ವೇಳೆಗೆ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಸೃಷ್ಟಿಯಾಗುವ ಸಾಧ್ಯತೆ ಇದ್ದು, ಇದರ ಪ್ರಭಾವ ತೀವ್ರವಾದರೆ ಅರಬಿ ಸಮುದ್ರದ ಮೋಡಗಳನ್ನು ಎಳೆದುಕೊಳ್ಳುವ ಸಾಧ್ಯತೆ ಇದೆ ಎಂದಿದ್ದಾರೆ.

ಇದನ್ನೂ ಓದಿ :ಕೋವಿಡ್ 19 : ಬಿಹಾರ್ ನ ‘ಹಿಟ್ ಕೋವಿಡ್ ಆ್ಯಪ್’ ಗೆ ಮೋದಿ ಮೆಚ್ಚುಗೆ

ಮುಂಗಾರು ಅವಧಿ ಸಾಮಾನ್ಯವಾಗಿ ಜೂನ್‌ನಿಂದ ಸೆಪ್ಟೆಂಬರ್‌ ವರೆಗೆ ಇರಲಿದ್ದು, ಈ ಬಾರಿ ರಾಜ್ಯದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಶೇ. 70 ಭಾಗದಲ್ಲಿ ವಾಡಿಕೆ ಅಥವಾ ಅದಕ್ಕಿಂತ ಹೆಚ್ಚು, ಇನ್ನುಳಿದ ಶೇ. 30 ಭಾಗದಲ್ಲಿ ವಾಡಿಕೆಗಿಂತ ಕಡಿಮೆ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞ ಹಾಗೂ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸಲಹೆಗಾರ ಶ್ರೀನಿವಾಸ ರೆಡ್ಡಿ ಮಾಹಿತಿ ನೀಡಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next