Advertisement

ಜೂನ್‌ನಲ್ಲಿ ವಿ.ವಿ. ಪರೀಕ್ಷೆ?

11:12 AM Apr 17, 2020 | Sriram |

ಬೆಂಗಳೂರು: ಕೋವಿಡ್ 19 ಲಾಕ್‌ಡೌನ್‌ನಿಂದಾಗಿ ಸದ್ಯ ಮುಂದೂಡಿಕೆಯಾಗಿರುವ ವಿಶ್ವವಿದ್ಯಾನಿಲಯದ ಪರೀಕ್ಷೆಗಳನ್ನು ಜೂನ್‌ ವೇಳೆಗೆ ನಡೆಸುವ ಪ್ರಸ್ತಾವ ರಾಜ್ಯ ಸರಕಾರದ ಮುಂದಿದೆ.

Advertisement

ವಿ.ವಿ. ಪರೀಕ್ಷೆಗಳನ್ನು ಜೂನ್‌ ವೇಳೆಗೆ ನಡೆಸುವ ಚಿಂತನೆ ಇದ್ದು, ಪರಿಸ್ಥಿತಿ ಗಮನಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಡಿಸಿಎಂ ಡಾ| ಅಶ್ವತ್ಥನಾರಾಯಣ ಹೇಳಿದ್ದಾರೆ.

ವಿವಿಧ ವಿ.ವಿ. ಉಪಕುಲಪತಿಗಳೊಂದಿಗೆ ಗುರುವಾರ ವೀಡಿಯೋ ಕಾನ್ಫರ ಸಭೆ ನಡೆಸಿದ ಬಳಿಕ ಅವರು ಈ ವಿಚಾರ ತಿಳಿಸಿದರು. ಪರೀಕ್ಷೆ ಯಾವಾಗ, ಹೇಗೆ ನಡೆಸಬೇಕು ಎಂಬ ಬಗ್ಗೆ ಉಪಕುಲಪತಿಗಳ ಸಲಹೆ ಕೇಳಲಾಗಿದೆ. ಆನ್‌ಲೈನ್‌ ಮೂಲಕ ಪಾಠ ಪೂರ್ಣಗೊಳಿಸಿ ಪರೀಕ್ಷೆ ನಡೆಸಬೇಕೇ ಅಥವಾ ತರಗತಿ ಆರಂಭವಾದ ಅನಂತರ ತಡವಾಗಿ ನಡೆಸಬೇಕೇ ಎಂಬ ಬಗ್ಗೆ ಮಾಹಿತಿ ಕೋರಲಾಗಿದೆ ಎಂದರು.

ಇದೇ ವೇಳೆ ಪದವಿ ವಿದ್ಯಾರ್ಥಿಗಳಿಗೆ ಪಠ್ಯಕ್ರಮ ಪೂರೈಸುವುದಕ್ಕಾಗಿ ಆರಂಭಿಸಿರುವ ಆನ್‌ಲೈನ್‌ ಬೋಧನಾ ಕ್ರಮ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಕಬ್ಬಿಣದ ಕಡಲೆಯಾಗುತ್ತಿರುವುದು ವರದಿಯಾಗಿದೆ. ಬಹುತೇಕ ಕಾಲೇಜುಗಳು ಆನ್‌ಲೈನ್‌ ತರಗತಿ ಆರಂಭಿಸಿವೆ. ಸರಕಾರಿ ಪದವಿ ಕಾಲೇಜುಗಳಲ್ಲಿ ಇದು ಪರಿಣಾಮಕಾರಿಯಾಗಿಲ್ಲ. ಇದು ನಗರ ಭಾಗದ ವಿದ್ಯಾರ್ಥಿಗಳಿಗೆ ಉಪಯುಕ್ತವಾಗಿದ್ದರೂ ಗ್ರಾಮೀಣ ವಿದ್ಯಾರ್ಥಿಗಳಿಗೆ ಇದರಲ್ಲಿ ಸಮರ್ಪಕವಾಗಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next