ಗ್ವಾಲಿಯರ್: ಇಲ್ಲಿನ ಸರಕಾರಿ ವೈದ್ಯಕೀಯ ಕಾಲೇಜಿನ ಕಿರಿಯ ವೈದ್ಯೆಯ ಮೇಲೆ ಆಕೆಯ ಸಹೋದ್ಯೋಗಿಯೇ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದೆ ಎನ್ನಲಾಗಿದೆ.
ಕಿರಿಯ ವೈದ್ಯೆ ಪೊಲೀಸರಿಗೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಘಟನೆ ಭಾನುವಾರ(ಜ.5) ನಡೆದಿದ್ದು ಸೋಮವಾರ ಆರೋಪಿಯನ್ನು ಪೊಲೀಸರು ಬಂಧಿಸಿರುವುದಾಗಿ ಮಾಹಿತಿ ನೀಡಿದ್ದಾರೆ.
ಘಟನೆ ಕುರಿತು ಮಾಹಿತಿ ನೀಡಿದ ನಗರ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಜಾಡೋನ್ ಸಂತ್ರಸ್ತೆ ಹಾಗೂ ಆರೋಪಿ ಇಬ್ಬರೂ ಒಂದೇ ವೈದ್ಯಕೀಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು ಜೊತೆಗೆ ಇಬ್ಬರೂ ಆಸ್ಪತ್ರೆಯ ಹಾಸ್ಟೆಲ್ ಗಳಲ್ಲಿ ನೆಲೆಸಿದ್ದರು ಎನ್ನಲಾಗಿದೆ ಭಾನುವಾರ ಆರೋಪಿ ಸಂತ್ರಸ್ತೆಯನ್ನು ತಾನಿರುವ ಹಾಸ್ಟೆಲ್ ಬಳಿ ಮಾತನಾಡಲು ಬರುವಂತೆ ಹೇಳಿದ್ದಾನೆ ಅದರಂತೆ ಸಂತ್ರಸ್ತೆ ಹುಡುಗರ ಹಾಸ್ಟೆಲ್ ಬಳಿ ಬಂದಿದ್ದಾಳೆ ಈ ವೇಳೆ ಆಕೆಯನ್ನು ಬೆದರಿಸಿ ಆಕೆಯ ಮೇಲೆ ಆರೋಪಿ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಘಟನೆ ಸಂಬಂಧ ಸಂತ್ರಸ್ತೆ ಇಲ್ಲಿನ ಕಂಪು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಳು ಇದರ ಆಧಾರದ ಮೇಲೆ ಆರೋಪಿಯನ್ನು ಬಂಧಿಸಿದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್