Advertisement

ಉಪ ಲೋಕಾಯುಕ್ತರಾಗಿ ನ್ಯಾ. ಭೀಮನಗೌಡ ಸಂಗನಗೌಡ ಪಾಟೀಲ್ ಪ್ರಮಾಣ ವಚನ

09:29 AM Nov 22, 2019 | Hari Prasad |

ಬೆಂಗಳೂರು: ಕರ್ನಾಟಕ ಉಪಲೋಕಾಯುಕ್ತರಾಗಿ ಕರ್ನಾಟಕ ಉಚ್ಛ ನ್ಯಾಯಾಲಯದ ನಿವೃತ್ತ  ನ್ಯಾಯಾಧೀಶ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಅವರು ಇಲ್ಲಿ ಇಂದು  ಪ್ರಮಾಣ ವಚನ ಸ್ವೀಕರಿಸಿದರು.

Advertisement

ರಾಜ ಭವನದ ಔತಣ ಸಭಾಂಗಣದಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಅವರಿಗೆ ಅಧಿಕಾರ ಪ್ರಮಾಣ ವಚನವನ್ನು ಬೋಧಿಸಿದರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಖಾತೆಗಳ ಹೊತ್ತ ಉಪ ಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ, ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥಶೆಟ್ಟಿ ಅವರೂ ಸೇರಿದಂತೆ ಹಲವು ಗಣ್ಯರು ಈ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next