Advertisement

ಭಾರತದ 50 ನೇ ಮುಖ್ಯ ನ್ಯಾಯಮೂರ್ತಿಯಾಗಿ ಡಿ.ವೈ. ಚಂದ್ರಚೂಡ್ ನೇಮಕ

07:35 PM Oct 17, 2022 | Team Udayavani |

ನವದೆಹಲಿ: ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು ಸೋಮವಾರ ಭಾರತದ 50 ನೇ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದಾರೆ ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ.

Advertisement

ಹಾಲಿ ಸಿಜೆಐ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರು 65 ನೇ ವಯಸ್ಸಿನಲ್ಲಿ ಅಧಿಕಾರಾವಧಿ ಮುಕ್ತಾಯವಾದ ಒಂದು ದಿನದ ನಂತರ, ನ್ಯಾ. ಚಂದ್ರಚೂಡ್ ನವೆಂಬರ್ 9 ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನ್ಯಾಯಮೂರ್ತಿ ಲಲಿತ್ 74 ದಿನಗಳ ಸಂಕ್ಷಿಪ್ತ ಅಧಿಕಾರಾವಧಿಯನ್ನು ಹೊಂದಿದ್ದರೆ, ನ್ಯಾಯಮೂರ್ತಿ ಚಂದ್ರಚೂಡ್ ಎರಡು ವರ್ಷಗಳ ಕಾಲ ಸಿಜೆಐ ಆಗಿ ಕಾರ್ಯನಿರ್ವಹಿಸಲಿದ್ದಾರೆ.

“ಭಾರತದ ಸಂವಿಧಾನವು ನೀಡಿರುವ ಅಧಿಕಾರವನ್ನು ಚಲಾಯಿಸಿ, ಗೌರವಾನ್ವಿತ ರಾಷ್ಟ್ರಪತಿಗಳು ಡಾ. ಜಸ್ಟಿಸ್ ಡಿ.ವೈ. ಚಂದ್ರಚೂಡ್ ನ್ಯಾಯಾಧೀಶರು, ಸುಪ್ರೀಂ ಕೋರ್ಟ್ ಅವರನ್ನು ನವೆಂಬರ್ 9, 22 ರಿಂದ ಜಾರಿಗೆ ಬರುವಂತೆ ಭಾರತದ ಮುಖ್ಯ ನ್ಯಾಯಾಧೀಶರನ್ನಾಗಿ ನೇಮಿಸಲಾಗಿದೆ” ಎಂದು ರಿಜಿಜು ಟ್ವೀಟ್ ಮಾಡಿದ್ದಾರೆ.

ನ್ಯಾಯಮೂರ್ತಿ ಚಂದ್ರಚೂಡ್ ಅವರು ನವೆಂಬರ್ 10, 2024 ರಂದು ಅಧಿಕಾರಾವಧಿ ಮುಕ್ತಾಯವಾಗಲಿದೆ.

Advertisement

Udayavani is now on Telegram. Click here to join our channel and stay updated with the latest news.

Next