ನವದೆಹಲಿ : ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರು ಇಂದು ದೇಶದ 50 ನೇ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕರಿಸಿದರು.
ಬುಧವಾರ ಬೆಳಗ್ಗೆ ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಚಂದ್ರಚೂಡ್ ಅವರು ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದರೊಂದಿಗೆ ಅವರು ಇಂದು ನಿವೃತ್ತರಾಗುತ್ತಿರುವ ಸಿಜೆಐ ಯುಯು ಲಲಿತ್ ಅವರ ಸ್ಥಾನವನ್ನು ಅಲಂಕರಿಸಿದ್ದಾರೆ.
ನ್ಯಾಯಮೂರ್ತಿ ಚಂದ್ರಚೂಡ್ ಅವರ ತಂದೆ ದೇಶದ ಸಿಜೆಐ ಕೂಡ ಆಗಿದ್ದಾರೆ. ಅವರ ತಂದೆ ಸಿಜೆಐ ಆಗಿ ಸುಮಾರು ಏಳು ವರ್ಷ ನಾಲ್ಕು ತಿಂಗಳ ಅಧಿಕಾರಾವಧಿ ಹೊಂದಿದ್ದರು. ಇದು ಸುಪ್ರೀಂ ಕೋರ್ಟ್‌ನ ಇತಿಹಾಸದಲ್ಲಿ ಸಿಜೆಐ ಅವರ ಸುದೀರ್ಘ ಅವಧಿಯಾಗಿದೆ. ಅವರು 22 ಫೆಬ್ರವರಿ 1978 ರಿಂದ 11 ಜುಲೈ 1985 ರವರೆಗೆ ಮುಖ್ಯ ನ್ಯಾಯಮೂರ್ತಿಯಾಗಿದ್ದರು.
ನ್ಯಾಯಮೂರ್ತಿ ಚಂದ್ರಚೂಡ್ ಅವರು ನವೆಂಬರ್ 10, 2024 ರವರೆಗೆ ಎರಡು ವರ್ಷಗಳ ಕಾಲ ಸಿಜೆಐ ಆಗಿ ಕಾರ್ಯನಿರ್ವಹಿಸಲಿದ್ದಾರೆ.
ಇದನ್ನೂ ಓದಿ : ಹಿಂದುಳಿದ ವರ್ಗದ ಸಚಿವರನ್ನೇ ಗುರಿಯಾಗಿಸಿ ಕಾಂಗ್ರೆಸ್ ಷಡ್ಯಂತ್ರ ರೂಪಿಸುತ್ತಿದೆ: ಸಚಿವ ಭೈರತಿ