Advertisement
ನ್ಯಾ| ಡಿ.ವೈ. ಚಂದ್ರಚೂಡ್ ನೇತೃತ್ವದ ನ್ಯಾಯಪೀಠವು ಸೇನಾಪಡೆಯಲ್ಲಿ ಲಿಂಗ ತಾರತಮ್ಯ ನಿವಾರಿಸುವ ನಿಟ್ಟಿನಲ್ಲಿ ಹಲವಾರು ನೆಪಗಳನ್ನು ಸರಕಾರ ಹೇಳುವಂತೆಯೇ ಇಲ್ಲ ಎಂದು ಕೇಂದ್ರ ಸರಕಾರಕ್ಕೆ ಸ್ಪಷ್ಟವಾಗಿ ತಾಕೀತು ಮಾಡಿತು. ದೇಶಕ್ಕಾಗಿ ಸೇವೆ ಸಲ್ಲಿಸಿದ ಅಧಿಕಾರಿಗಳಿಗೆ ಶಾಶ್ವತ ಆಯೋಗ ರಚನೆ ಮಾಡದೇ ಇದ್ದರೆ ಅಂಥವರಿಗೆ ನ್ಯಾಯ ನೀಡಿಕೆಯಲ್ಲಿ ಭಾರಿ ಕೊರತೆಯಾದಂತೆ ಆದೀತು. ಸಮುದ್ರದಲ್ಲಿ ಕರ್ತವ್ಯ ನಿರ್ವಹಿಸುವ ಮಹಿಳಾ ಅಧಿಕಾರಿಗಳಿಗೆ ಶಾರ್ಟ್ ಸರ್ವಿಸ್ ಕಮಿಷನ್ (ಎಸ್‌ಎಸ್‌ಸಿ) ರಚಿಸಲು ಸಾಧ್ಯವಿಲ್ಲ ಎಂಬ ಕೇಂದ್ರದ ವಾದವನ್ನು ಒಪ್ಪಲಾಗದು ಎಂದು ನ್ಯಾಯಪೀಠ ಹೇಳಿದೆ.
ಈ ವಿಚಾರದಲ್ಲಿ ಸರಕಾರದ ನೀತಿಯ ವಿರುದ್ಧ ಕಾನೂನು ಸಮರ ನಡೆಸಿದ್ದ ನೌಕಾಪಡೆಯ ನಿವೃತ್ತ ಮಹಿಳಾ ಆಫೀಸರ್‌ಗಳು ಐತಿಹಾಸಿಕ ಆದೇಶದಿಂದ ಹರ್ಷಗೊಂಡಿದ್ದಾರೆ. ಮಹಿಳಾ ಅಧಿಕಾರಿಗಳು ಸಮರ ನೌಕೆಯನ್ನು ಮುನ್ನಡೆಸುವ ಅಥವಾ ಸಬ್‌ಮರೀನ್‌ಗಳಲ್ಲಿ ಸೇವೆ ಸಲ್ಲಿಸುವ ದಿನಗಳನ್ನು ತಾವು ಕಾಯುತ್ತಿರುವುದಾಗಿ ಅವರು ಹೇಳಿದ್ದಾರೆ.