Advertisement
ಅವರು ಇಂದು ಜಗದ್ಗುರು ಶ್ರೀ ರೇವಣಸಿದ್ದೇಶ್ವರ ಸಿದ್ದಸಿಂಹಾಸನದ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ವಿಭಾಗೀಯ ಮಠ ಮೈಸೂರು ಇವರ ವತಿಯಿಂದ ಗುರುಪೀಠದ ಬಳಿ ಆಯೋಜಿಸಿರುವ ಸನ್ಮಾನ ಸಮಾರಂಭ”ದಲ್ಲಿ ಪಾಲ್ಗೊಂಡು ಮಾತನಾಡಿದರು.
ಜನರ ಆಶೀರ್ವಾದದ ಫಲದಿಂದ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗುತ್ತಿದೆ. ಇತರೆ ರಾಜಕೀಯ ಪಕ್ಷಗಳು ರಾಜಕೀಯ ಪ್ರೇರಿತವಾಗಿ ಟೀಕೆ ಮಾಡುತ್ತದೆ. ವಿರೋಧಪಕ್ಷಗಳು ಮಾಡುವುದು ಕೇವಲ ಆರೋಪಗಳೇ ಹೊರತು, ಸತ್ಯವಲ್ಲ ಎಂದರು.
Related Articles
ನಾನು ರಾಜಕೀಯಕ್ಕೆ ಬಂದು 50 ವರ್ಷಗಳಾಗಿದೆ. 2005 ರಲ್ಲಿಜೆಡಿಎಸ್ ನಿಂದ ನನ್ನನ್ನು ಉಚ್ಛಾಟನೆ ಮಾಡಿದ ನಂತರ ಅನಿವಾರ್ಯವಾಗಿ ಕಾಂಗ್ರೆಸ್ ಸೇರಬೇಕಾಗಿ ಬಂತು. ಅಹ್ಮದ್ ಪಟೇಲ್ ಸೇರಿದಂತೆ ಅಂದಿನ ಕಾಂಗ್ರೆಸ್ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರಲು ತಿಳಿಸಿದರು. ಜನರ ಆಶೀರ್ವಾದದಿಂದ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗುವ ಅವಕಾಶ ದೊರೆತಿದ್ದು, ಜಾತ್ಯಾತೀತ ರಾಜಕೀಯ ನೀತಿಯನ್ನು ಪಾಲಿಸುವುದಾಗಿ ತಿಳಿಸಿದರು. ಸಂವಿಧಾನದಲ್ಲಿ ತಿಳಿಸಿದಂತೆ ಎಲ್ಲ ಜಾತಿ ಮತ್ತು ಧರ್ಮದವರನ್ನು ಗೌರವಿಸಿ, ಜಾತ್ಯತೀತವಾಗಿರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಾ, ಸಾಮಾಜಿಕ ನ್ಯಾಯದಿಂದ ವಂಚಿತರಾಗಿರುವ ವರ್ಗಗಳ ಪರವಾಗಿ ನಿಲ್ಲುವುದಾಗಿ ತಿಳಿಸಿದರು.
Advertisement