ಹೊಸದಿಲ್ಲಿ : ಜಮ್ಮು ಕಾಶ್ಮೀರದ ಹೈಕೋರ್ಟ್‌ನ ಮೊದಲ ಮಹಿಳಾ ಮುಖ್ಯ ನ್ಯಾಯಾಧೀಶರನ್ನಾಗಿ ಜಸ್ಟಿಸ್ ಗೀತಾ ಮಿತ್ತಲ್ ಅವರನ್ನು ನೇಮಿಸಲಾಗಿದೆ.
Advertisement
ಜಸ್ಟಿಸ್ ಮಿತ್ತಲ್ ಅವರು ದಿಲ್ಲಿ ಹೈಕೋರ್ಟಿನಲ್ಲಿ ಪ್ರಭಾರ ಮುಖ್ಯ ನ್ಯಾಯಾಧೀಶೆಯಾಗಿ 2017ರ ಎಪ್ರಿಲ್‌ನಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಜಸ್ಟಿಸ್ ಮಿತ್ತಲ್ ಅವರನ್ನು ಜಮ್ಮು ಕಾಶ್ಮೀರ ಹೈಕೋರ್ಟಿನ ಮುಂದಿನ ಮುಖ್ಯ ನ್ಯಾಯಾಧೀಶೆಯನ್ನಾಗಿ ನೇಮಿಸುವಂತೆ ಸುಪ್ರೀಂ ಕೋರ್ಟ್ ವರಿಷ್ಠರ ಮಂಡಳಿ ಕಳೆದ ಜು.16ರಂದೇ ಶಿಫಾರಸು ಮಾಡಿತ್ತು. ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಜಸ್ಟಿಸ್ ಮಿತ್ತಲ್ ಅವರ ನೇಮಕಾತಿ ಆದೇಶಕ್ಕೆ ಸಹಿ ಹಾಕಿದರು.