Advertisement

ಸುಪ್ರೀಂಗೆ ನ್ಯಾ.ಜೋಸೆಫ್ ಹೆಸರು ಮತ್ತೆ ಶಿಫಾರಸು 

06:00 AM Jul 21, 2018 | Team Udayavani |

ನವದೆಹಲಿ: ಸುಪ್ರೀಂಕೋರ್ಟ್‌ಗೆ ಉತ್ತರಾಖಂಡ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಕೆ.ಎಂ.ಜೋಸೆಫ್ರನ್ನು ನೇಮಕ ಮಾಡುವ ಶಿಫಾರಸನ್ನು ಕೇಂದ್ರ ಸರ್ಕಾರ ವಾಪಸ್‌ ಕಳುಹಿಸಿದ್ದರೂ ಕೊಲಿಜಿಯಂ ಮತ್ತೆ ಅವರ ಹೆಸರನ್ನೇ ಶಿಫಾರಸು ಮಾಡಿದೆ. ಅವರೊಂದಿಗೆ ಮದ್ರಾಸ್‌ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಇಂದಿರಾ ಬ್ಯಾನರ್ಜಿ, ಒಡಿಶಾ ಹೈಕೋರ್ಟ್‌ ಮುಖ್ಯ ನ್ಯಾಯ ಮೂರ್ತಿ ವಿನೀತ್‌ ಶರಣ್‌ ಹೆಸರನ್ನೂ ಶಿಫಾರಸು ಮಾಡಿದೆ. ಇದೇ ವೇಳೆ ಕೇಂದ್ರ ಕಾನೂನು ಸಚಿವ ರವಿಶಂಕರ ಪ್ರಸಾದ್‌ ಬರೆದಿದ್ದ 2 ಪತ್ರಗಳಲ್ಲಿ ಪ್ರಸ್ತಾಪಿಸಿದಂತೆ, ನ್ಯಾ.ಜೋಸೆಫ್ರ ಹೆಸರಲ್ಲಿ ಯಾವುದೇ ಸಮಸ್ಯೆ ಇರಲಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ಹೇಳಿದ್ದಾರೆ.

Advertisement

7 ಹೈಕೋರ್ಟ್‌ಗಳಿಗೆ ನೇಮಕ: ಇದೇ ವೇಳೆ ದೆಹಲಿ, ಜಮ್ಮು ಮತ್ತು ಕಾಶ್ಮೀರ, ಮದ್ರಾಸ್‌, ಕೇರಳ, ಒಡಿಶಾ, ಜಾರ್ಖಂಡ್‌ ಮತ್ತು ಪಾಟ್ನಾ ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಮೂರ್ತಿಗಳ ಹೆಸರುಗಳನ್ನೂ ಕೊಲೀಜಿಯಂ ಶಿಫಾರಸು ಮಾಡಿದೆ.

Advertisement

Udayavani is now on Telegram. Click here to join our channel and stay updated with the latest news.

Next