Advertisement

High Court ಮುಖ್ಯ ನ್ಯಾಯಮೂರ್ತಿಯಾಗಿ ನಿಲಯ್ ವಿಪಿನ್ ಚಂದ್ರ ಅಂಜಾರಿಯಾ ಪ್ರಮಾಣ ವಚನ

06:40 PM Feb 25, 2024 | Team Udayavani |

ಬೆಂಗಳೂರು: ನ್ಯಾಯಮೂರ್ತಿ ನಿಲಯ್ ವಿಪಿನ್ ಚಂದ್ರ ಅಂಜಾರಿಯಾ ಅವರು ಕರ್ನಾಟಕ ಹೈಕೋರ್ಟ್‌ನ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರು.

Advertisement

ರಾಜಭವನದ ‘ಗಾಜಿನ ಮನೆ’ಯಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಪ್ರಮಾಣ ವಚನ ಬೋಧಿಸಿದರು.ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಕಾನೂನು ಮತ್ತು ಸಂಸದೀಯ ಸಚಿವ ಎಚ್.ಕೆ. ಪಾಟೀಲ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

ಅಂಜಾರಿಯಾ ಅವರು ಈ ಹಿಂದೆ ಗುಜರಾತ್ ಹೈಕೋರ್ಟ್‌ನ ನ್ಯಾಯಾಧೀಶರಾಗಿದ್ದರು ಮತ್ತು ಅವರ ಹೆಸರನ್ನು ಸುಪ್ರೀಂ ಕೋರ್ಟ್ ಕೊಲಿಜಿಯಂ ಈ ತಿಂಗಳ ಆರಂಭದಲ್ಲಿ ಶಿಫಾರಸು ಮಾಡಿತ್ತು.

ಜಸ್ಟಿಸ್ ಅಂಜಾರಿಯಾ ಅವರು ನವೆಂಬರ್ 2011 ರಲ್ಲಿ ಗುಜರಾತ್ ಹೈಕೋರ್ಟ್‌ನ ನ್ಯಾಯಾಧೀಶರಾಗಿ ನೇಮಕಗೊಂಡು ಕಾರ್ಯನಿರ್ವಹಿಸುತ್ತಿದ್ದರು.

ನ್ಯಾಯಾಧೀಶರಾಗಿ ಪದೋನ್ನತಿಯಾಗುವ ಮೊದಲು ಅವರು ಗುಜರಾತ್ ಹೈಕೋರ್ಟ್‌ನಲ್ಲಿ ಸಿವಿಲ್, ಸಾಂವಿಧಾನಿಕ, ಕಂಪನಿ ಕಾನೂನು, ಕಾರ್ಮಿಕ ಮತ್ತು ಸೇವಾ ವಿಷಯಗಳಲ್ಲಿ ಅಭ್ಯಾಸ ಮಾಡಿದ್ದರು ಎಂದು ಕೊಲಿಜಿಯಂ ಅವರ ಹೆಸರನ್ನು ಶಿಫಾರಸು ಮಾಡುವಾಗ ಗಮನಿಸಿದೆ.

Advertisement

ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿದ್ದ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರು ಫೆಬ್ರವರಿ 24 ರಂದು 62 ವರ್ಷಗಳನ್ನು ಪೂರೈಸಿ ನಿರ್ಗಮಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next