Advertisement

ಸುಪ್ರೀಂಕೋರ್ಟ್ ನ 47ನೇ ನೂತನ ಸಿಜೆಐ ನ್ಯಾ.ಶರದ್ ಅರವಿಂದ್ ಬೋಬ್ಡೆ ಪ್ರಮಾಣವಚನ ಸ್ವೀಕಾರ

09:25 AM Nov 19, 2019 | Nagendra Trasi |

ನವದೆಹಲಿ: ಅಯೋಧ್ಯೆ ವಿವಾದದ ಕುರಿತು ಐತಿಹಾಸಿಕ ತೀರ್ಪು ನೀಡಿದ್ದ ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಾಧೀಶ ನ್ಯಾ.ರಂಜನ್ ಗೋಗೊಯಿ ಅವರು ಭಾನುವಾರ ನಿವೃತ್ತಿ ಹೊಂದಿದ್ದು, ಸೋಮವಾರ 47ನೇ ನೂತನ ಮುಖ್ಯ ನ್ಯಾಯಾಧೀಶರಾಗಿ ನ್ಯಾ.ಶರದ್ ಅರವಿಂದ್ ಬೋಬ್ಡೆ ಪ್ರಮಾಣವಚನ ಸ್ವೀಕರಿಸಿದ್ದಾರೆ.

Advertisement

ನ್ಯಾ.ಎಸ್.ಎ.ಬೋಬ್ಡೆ ಅವರು ಸುಪ್ರೀಂಕೋರ್ಟ್ ಸಿಜೆಐ ಆಗಿ ಸುಮಾರು 17 ತಿಂಗಳ ಕಾಲ ಕಾರ್ಯನಿರ್ವಹಿಸಲಿದ್ದಾರೆ. ಇವರು 2021ರ ಏಪ್ರಿಲ್ 23ರಂದು ಸೇವೆಯಿಂದ ನಿವೃತ್ತಿಯಾಗಲಿದ್ದಾರೆ.ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ನೂತನ ಸಿಜೆಐ ನ್ಯಾ.ಎಸ್.ಎ.ಬೋಬ್ಡೆ ಅವರಿಗೆ ಪ್ರಮಾಣವಚನ ಬೋಧಿಸಿದರು.

ಅಯೋಧ್ಯೆಯ ವಿವಾದಿತ ರಾಮಜನ್ಮಭೂಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ಐತಿಹಾಸಿಕ ತೀರ್ಪು ನೀಡಿದ್ದ ಸುಪ್ರೀಂಕೋರ್ಟ್ ನ ಪಂಚಸದಸ್ಯ ಸಾಂವಿಧಾನಿಕ ಪೀಠದಲ್ಲಿ ನ್ಯಾ.ಎಸ್.ಎ.ಬೋಬ್ಡೆ ಕೂಡಾ ಒಬ್ಬರಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next