Advertisement

ಸು.ಕೋರ್ಟ್‌ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ ನ್ಯಾ.ಧುಲಿಯಾ, ನ್ಯಾ.ಪರ್ದಿವಾಲಾ

11:52 PM May 09, 2022 | Team Udayavani |

ನವದೆಹಲಿ: ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಗಳಾಗಿ ಪದೋನ್ನತಿ ಪಡೆದಿರುವ ನ್ಯಾ.ಸುಧಾಂಶು ಧುಲಿಯಾ ಮತ್ತು ನ್ಯಾ.ಜೆ.ಬಿ.ಪರ್ದಿವಾಲಾ ಅವರು ಸೋಮವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

Advertisement

ಇದರಿಂದಾಗಿ ಸುಪ್ರೀಂಕೋರ್ಟ್‌ನಲ್ಲಿ ಹೊಂದಿರಬೇಕಾದ ಪೂರ್ಣ ಪ್ರಮಾಣದ ನ್ಯಾಯಮೂರ್ತಿಗಳ ಸಂಖ್ಯೆ 34, ಭರ್ತಿಯಾದಂತಾಗಿದೆ. ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ ನೂತನ ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಿದ್ದಾರೆ.

ಸುಪ್ರೀಂಕೋರ್ಟ್‌ನಲ್ಲಿರುವ ಅಡಿಟೋರಿಯಂನಲ್ಲಿ ಕಾರ್ಯಕ್ರಮ ನಡೆಯಿತು. ನ್ಯಾ.ಧುಲಿಯಾ ಮೂಲತಃ ಮಣಿಪುರದವರು ಮತ್ತು ಪದೋನ್ನತಿಗೆ ಮುನ್ನ ಅವರು ಗುವಾಹಟಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿದ್ದರು. ನ್ಯಾ.ಜೆ.ಬಿ.ಪರ್ದಿವಾಲಾ ಗುಜರಾತ್‌ ಹೈಕೋರ್ಟ್‌ನಲ್ಲಿ ನ್ಯಾಯಮೂರ್ತಿಯಾಗಿದ್ದವರು.

ಇದನ್ನೂ ಓದಿ : ಅಕ್ಕನ ಗಂಡ ತಂಗಿಗೆ, ತಂಗಿ ಗಂಡ ಅಕ್ಕನಿಗೆ! ಕತ್ತಲಲ್ಲಿ ನಡೆದ ಮದುವೆಯಲ್ಲಿ ಆಯಿತು ಅದಲು ಬದಲು

Advertisement

Udayavani is now on Telegram. Click here to join our channel and stay updated with the latest news.

Next