Advertisement
ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂ (ರಿ), ರಾಜ್ಯ ಖಾಸಗಿ ಶಿಕ್ಷಣ ಸಂಸ್ಥೆಗಳ ನೌಕರರ ಹಾಗೂ ಆಡಳಿತ ಮಂಡಳಿಗಳ ಹೋರಾಟ ಸಮನ್ವಯ ಸಮಿತಿ ಹಾಗೂ ರಾಜ್ಯದ ವಿವಿಧ ಸಂಟನೆಗಳ ಆಶ್ರಯದಲ್ಲಿ ಧಾರವಾಡದಲ್ಲಿ ನಡೆಯುತ್ತಿರುವ ಸತ್ಯಾಗ್ರಹದ ಹಿನ್ನೆಲೆಯಲ್ಲಿ ಸೋಮವಾರ ಬೆಂಗಳೂರಿನಲ್ಲಿ ವಿಧಾನಪರಿಷತ್ ಸದಸ್ಯ ಬಸವರಾಜ ಎಸ್. ಹೊರಟ್ಟಿ ಮತ್ತು ಸಂಟಘನೆಗಳ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಿ ಮಾತನಾಡಿದ ಅವರು, ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಸರ್ಕಾರಿ ನೌಕರರಿಗಿರುವ ಸೌಲಭ್ಯಗಳನ್ನು ನೀಡುವಲ್ಲಿ ಸರ್ಕಾರ ಮುಕ್ತ ಮನಸ್ಸು ಹೊಂದಿದ್ದು, ಈ ಕುರಿತಂತೆ ಮುಖ್ಯಮಂತ್ರಿಗಳೊಂದಿಗೆ ಸೂಕ್ತ ವೇದಿಕೆಯಲ್ಲಿ ಚರ್ಚಿಸಿ ನಿರ್ಧಾರಕ್ಕೆ ಬರಲಾಗುವುದು ಎಂದರು.
Related Articles
Advertisement
2015ರ ನಂತರ ಅನುದಾನಿತ ಶಾಲಾ ಕಾಲೇಜುಗಳಲ್ಲಿ ನಿವೃತ್ತಿ, ನಿಧನ ಸೇರಿದಂತೆ ಹಲವಾರು ಕಾರಣಗಳಿಂದ ತೆರವಾಗಿರುವ ಹುದ್ದೆಗಳ ಭರ್ತಿಗೆ ಪ್ರಸ್ತುತ ಆರ್ಥಿಕ ಇಲಾಖೆಯ ನಿರ್ಬಂಧದ ತೆರವಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು. ಹಾಗೆಯೇ ಇದಕ್ಕೂ ಮುನ್ನ ರಾಜ್ಯದ ಖಾಸಗಿ ಅನುದಾನಿತ ಶಾಲಾ ಕಾಲೇಜುಗಳಲ್ಲಿ ಖಾಲಿಯಾಗಿರುವ ಹುದ್ದೆಗಳ ವಿವರಗಳನ್ನು ಶಾಲಾವಾರು ಸಂಗ್ರಹಿಸಿ ಸಲ್ಲಿಸಬೇಕೆಂದು ಸುರೇಶ್ ಕುಮಾರ್ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರಿಗೆ ಸೂಚನೆ ನೀಡಿದರು.
ಅನುದಾನ ರಹಿತ ಖಾಸಗಿ ಶಾಲೆಗಳ ಶಿಕ್ಷಕರು ಮತ್ತು ಸಿಬ್ಬಂದಿಯ ಸೇವಾ ಭದ್ರತೆ ಆಯಾ ಆಡಳಿತ ಮಂಡಳಿಗಳ ಜವಾಬ್ದಾರಿಯಾಗಿದ್ದು, ಈ ನಿಟ್ಟಿನಲ್ಲಿ ಕಠಿಣ ಸುತ್ತೋಲೆಯನ್ನು ಕೂಡಲೇ ಜಾರಿ ಮಾಡುವುದಲ್ಲದೇ ವಿಚಕ್ಷಣಾ ವ್ಯವಸ್ಥೆಯನ್ನು ಬಲಪಡಿಸಲಾಗುವುದು ಎಂದು ಸಚಿವರು ವಿವರಿಸಿದರು.
ಶಿಕ್ಷಕ ಮತ್ತು ವಿದ್ಯಾರ್ಥಿಗಳ ಪ್ರಸ್ತುತ ಅನುಪಾತ 1:70ನ್ನು 1:50ಕ್ಕೆ ಬದಲಾಯಿಸುವ ಕುರಿತು ಆಡಳಿತಾತ್ಮಕ ಅನುಮೋದನೆ ನೀಡುವ ಸಂಬಂಧದಲ್ಲಿ ಪ್ರಸ್ತಾವನೆ ಸಲ್ಲಿಸಬೇಕೆಂದು ಸೂಚನೆ ನೀಡಿದರು. ಖಾಸಗಿ ಅನುದಾನಿತ ಶಾಲೆಗಳ ಶಿಕ್ಷಕರಿಗೆ ಸರ್ಕಾರಿ ಶಾಲಾ ಶಿಕ್ಷಕರಿಗೆ ನೀಡುವ ತರಬೇತಿಯನ್ನು ವಿಸ್ತರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಧಾರವಾಡ ವಿಭಾಗದಲ್ಲಿ 100ಕ್ಕಿಂತ ಕಡಿಮೆ ಇರುವ ಶಾಲೆಗಳ ನೊಂದಣಿ ರದ್ದುಪಡಿಸಲು ಆ ಭಾಗದ ಆಯುಕ್ತರು ಹೊರಡಿಸಿರುವ ಆದೇಶ ಶಿಕ್ಷಣ ಅಧಿನಿಯಮದ ಆದೇಶಕ್ಕೆ ವಿರುದ್ಧವಾಗಿದ್ದು, ತಕ್ಷಣವೇ ಹಿಂಪಡೆಯಲು ಅಪರ ಆಯುಕ್ತರಿಗೆ ನಿರ್ದೇಶನ ನೀಡಬೇಕೆಂದು ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸೂಚನೆ ನೀಡಿದರು.
ಸರ್ಕಾರವು ಎಲ್ಲ ಶಿಕ್ಷಕರ ಸಮಸ್ಯೆಯನ್ನು ಪರಿಹರಿಸಲು ತೆರೆದ ಮನಸ್ಸು ಹೊಂದಿದ್ದು ಮೂರು ತಿಂಗಳ ಅವಧಿಯಲ್ಲಿ ಈಡೇರಿಸಲು ಸಾಧ್ಯವಾಗಬಹುದಾದ ಬೇಡಿಕೆಗಳನ್ನು ಅನುಷ್ಠಾನಗೊಳಿಸುವಲ್ಲಿ ಕ್ರಮ ವಹಿಸುತ್ತದೆ. ನಾಡಿನ ಮಕ್ಕಳ ಹಿತದೃಷ್ಟಿಯಿಂದ ಸಂಘಟನೆಯು ನಡೆಸುತ್ತಿರುವ ಪ್ರತಿಭಟನೆಯನ್ನು ಹಿಂಪಡೆಯಬೇಕೆಂದು ಸುರೇಶ್ ಕುಮಾರ್ ಮನವಿ ಮಾಡಿದರು.
ಸಭೆಯಲ್ಲಿ ಮಾಜಿ ಶಿಕ್ಷಣ ಸಚಿವರೂ ಆದ ವಿಧಾನಪರಿಷತ್ ಸದಸ್ಯ ಬಸವರಾಜ ಎಸ್. ಹೊರಟ್ಟಿ, ಸಂಘಟನೆಯ ರಾಜ್ಯ ಸಂಟನಾ ಕಾರ್ಯದರ್ಶಿ ಶಾಮ ಮಲ್ಲನಗೌಡ, ಪ್ರಧಾನ ಕಾರ್ಯದರ್ಶಿ ಜಿ.ಆರ್. ಭಟ್ ಮತ್ತಿತರರು ಭಾಗವಹಿಸಿದ್ದರು.