Advertisement

ಮೀಸಲಾತಿ ವಿಚಾರಕ್ಕೆ ಹೋರಾಟದ ಅಗತ್ಯವಿಲ್ಲ : ಸಚಿವ ಕೆ.ಸಿ.ನಾರಾಯಣಗೌಡ 

08:57 PM Oct 29, 2022 | Team Udayavani |

ಮಂಡ್ಯ: ಒಕ್ಕಲಿಗ ಸಮುದಾಯದ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿ ಸಿದಂತೆ ಹೋರಾಟ ಅಗತ್ಯವಿಲ್ಲ. ಸರ್ಕಾರದ ಮಟ್ಟದಲ್ಲಿ ಮಾತುಕತೆ ನಡೆಸಿ ಮೀಸಲಾತಿ ಹೆಚ್ಚಳಕ್ಕೆ ಪ್ರಯತ್ನಿಸಲಾಗುವುದು ಎಂದು ಸಚಿವ ಕೆ.ಸಿ.ನಾರಾಯಣಗೌಡ ಹೇಳಿದರು.

Advertisement

ನಗರದಲ್ಲಿ ಮೃತ್ತಿಕೆ ಸಂಗ್ರಹ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ನಂಜಾವಧೂತ ಸ್ವಾಮೀಜಿ ಬಗ್ಗೆ ನನಗೆ ಅಪಾರ ಗೌರವವಿದೆ. ಆದರೂ ಹೋರಾಟ ಅಗತ್ಯವಿಲ್ಲ. ಸರ್ಕಾರದ ಮಟ್ಟದಲ್ಲಿ ಮಾತುಕತೆ ನಡೆಸಿ ಮೀಸಲಾತಿ ಹೋರಾಟಕ್ಕೆ ನ್ಯಾಯ ದೊರಕಿಸಿಕೊಡಲು ಪ್ರಯತ್ನಿಸಲಾಗುವುದು. ಕೇಂದ್ರ ಸರ್ಕಾರದ ಒಪ್ಪಿಗೆ ಬೇಕಾಗಿರುವುದರಿಂದ ಸ್ವಲ್ಪ ಸಮಯ ಹಿಡಿಯಬಹುದು. ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ಖಂಡಿತ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ : ಸರ್ಕಾರಿ ಉದ್ಯೋಗಿಗಳ ಸಂಖ್ಯೆ ಶೀಘ್ರವೇ ಹೆಚ್ಚಳ; ದೇಶದಲ್ಲಿ ಉದ್ಯೋಗ ಪರ್ವ ಆರಂಭ: ಮೋದಿ

Advertisement

Udayavani is now on Telegram. Click here to join our channel and stay updated with the latest news.

Next