ಬೆಂಗಳೂರು: ರಾಜ್ಯಸಭೆಯ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿರುವ ಬಿಜೆಪಿಯ ಅಭ್ಯರ್ಥಿ ಕೆ.ಸಿ. ರಾಮಮೂರ್ತಿ ಅವರನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಭಿನಂದಿಸಿದ್ದಾರೆ.
ರಾಮಮೂರ್ತಿಯವರ ಅವಿರೋಧ ಆಯ್ಕೆಯಿಂದ ರಾಜ್ಯಸಭೆಯಲ್ಲಿ ಬಿಜೆಪಿ ಸಂಖ್ಯಾಬಲ ಹೆಚ್ಚಿರುವುದಲ್ಲದೆ ಪಕ್ಷ ಇನ್ನಷ್ಟು ಬಲಿಷ್ಠಗೊಳ್ಳಲು ಪೂರಕವಾಗಲಿದೆ ಎಂದು ಮುಖ್ಯಮಂತ್ರಿಗಳು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.
ಡಿಸೆಂಬರ್ 12ರಂದು ರಾಜ್ಯಸಭೆ ಉಪ ಚುನಾವಣೆ ನಡೆಯಬೇಕಾಗಿತ್ತು. ಆದರೆ ಬಿಜೆಪಿಯ ಕೆ ಸಿ ರಾಮಮೂರ್ತಿ ಹೊರತು ಪಡಿಸಿ ಯಾರೂ ನಾಮಪತ್ರ ಸಲ್ಲಿಸದ ಕಾರಣ ಕೆ ಸಿ ರಾಮಮೂರ್ತಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಆಯ್ಕೆಯನ್ನು ವಿಧಾನಸಭೆಯ ಕಾರ್ಯದರ್ಶಿ ಎಂಕೆ ವಿಶಾಲಾಕ್ಷ್ಮಿ ಘೋಷಸಿದರು.
ಅವಿರೋಧ ಆಯ್ಕೆಯ ನಂತರ ಮಾತನಾಡಿದ ಕೆ ಸಿ ರಾಮಮೂರ್ತಿ, ಬಿಜೆಪಿ ಪಕ್ಷದ ನಾಯಕರು, ರಾಷ್ಟ್ರೀಯ ನಾಯಕರಿಗೆ ಧನ್ಯವಾದ ಸಲ್ಲಿಸುತ್ತೇನೆ. ರಾಜ್ಯದ ಅಭಿವೃದ್ಧಿ ಗೆ ಶ್ರಮಿಸುತ್ತೇನೆ. ಮೋದಿ ಅವರ ಅಭಿವೃದ್ಧಿ ಕಾರ್ಯಕ್ರಮಗಳಿಂದ ನಾನು ಬಿಜೆಪಿಗೆ ಬಂದೆ. ದೇಶಕ್ಕೆ ಇನ್ನಷ್ಟು ಉತ್ತಮ ಕೆಲಸ ಮಾಡುತ್ತೇವೆ ಎಂದರು.